Publish Date: Mon, 19 Oct 2020 (10:13 IST)
Updated Date: Mon, 19 Oct 2020 (10:15 IST)
ಬೆಂಗಳೂರು: ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ.
19 ವರ್ಷದ ಸಂತ್ರಸ್ತ ಯುವತಿ ಅದೇ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಳು. ಆಕೆಯ ಜತೆ ಅಸಭ್ಯವಾಗಿ ವರ್ತಿಸಿದ್ದ ವೈದ್ಯ ರಾತ್ರಿ ವೇಳೆಯೂ ಮೊಬೈಲ್ ಗೆ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಕಳೆದ ತಿಂಗಳು ಅತ್ಯಾಚಾರಕ್ಕೂ ಯತ್ನಿಸಿದ್ದ. ಹೀಗಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ.