ಜೆಡಿಎಸ್ ಪಕ್ಷದ ಎಂಟಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ ಎನ್ನುವ ಉಹಾಪೋಹ ವರದಿಗಳ ಹಿನ್ನೆಲೆಯಲ್ಲಿ ಹೇಳಿಕೆ ನೀಡಿದ ದೇವೇಗೌಡ, ಐವರು ಶಾಸಕರನ್ನು ಹೊರತುಪಡಿಸಿ ಉಳಿದ ಎಲ್ಲಾ ಶಾಸಕರು ಕುಮಾರಸ್ವಾಮಿಯವರನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಜೂನ್ 12 ರಂದು ಜೆಡಿಎಸ್ ಪಕ್ಷದ ಸಭೆ ನಡೆಯಲಿದ್ದು ಅಡ್ಡ ಮತದಾನ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಕಾಂಗ್ರೆಸ್ ಪಕ್ಷದ ಮೂರನೇ ಕೇವಲ 32 ಮತಗಳು ಲಭ್ಯವಿವೆ. ಆದಾಗ್ಯೂ, ಜೂನ್ 11 ರಂದು ಚುನಾವಣೆ ನಡೆಸುವಂತೆ ಸಲಹೆ ನೀಡುತ್ತಿದೆ. ಇದು ಕುದುರೆ ವ್ಯಾಪರವಲ್ಲದೇ ಕತ್ತೆ ವ್ಯಾಪಾರವೇ? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ವೋಟಿಗಾಗಿ ನೋಟು ಘಟನೆಯ ರೂವಾರಿಯಾಗಿದ್ದು, ಹೆಚ್ಚುವರಿ ಮತಗಳನ್ನು ಪಡೆಯಲು ಹಣದ ವ್ಯವಹಾರ ಮಾಡುತ್ತಿದ್ದಾರೆ. ಜೆಡಿಎಸ್ ಪಕ್ಷವನ್ನು ಮುಗಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಖಾನ್ ಕೂಡಾ ಕುದುರೆ ವ್ಯಾಪಾರದಲ್ಲಿ ತೊಡಗಿದ್ದು, ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಗುಡುಗಿದರು.
ಮತದಾನ ಮುಕ್ತಾಯಗೊಂಡ ನಂತರ ಜಮೀರ್ ಅಹ್ಮದ್, ಚಲುವರಾಯಸ್ವಾಮಿ, ಅಖಂಡ ಶ್ರೀನಿವಾಸ್, ಇಕ್ಬಾಲ್ ಅನ್ಸಾರಿ ಮತ್ತು ಬಾಲಕೃಷ್ಣ ಹಾವೆ ವಿರುದ್ಧ ಯಾವ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎನ್ನುವುದನ್ನು ಹೇಳುತ್ತೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಎಚ್ಚರಿಕೆ ನೀಡಿದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.