ವೋಟಿಗಾಗಿ ನೋಟು ಘಟನೆಗೆ ಡಿ.ಕೆ.ಶಿವಕುಮಾರ್ ರೂವಾರಿ: ದೇವೇಗೌಡ

Webdunia
ಗುರುವಾರ, 9 ಜೂನ್ 2016 (20:29 IST)
ಜೆಡಿಎಸ್ ಪಕ್ಷದ ಎಂಟಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ ಎನ್ನುವ ಉಹಾಪೋಹ ವರದಿಗಳ ಹಿನ್ನೆಲೆಯಲ್ಲಿ  ಹೇಳಿಕೆ ನೀಡಿದ ದೇವೇಗೌಡ, ಐವರು ಶಾಸಕರನ್ನು ಹೊರತುಪಡಿಸಿ ಉಳಿದ ಎಲ್ಲಾ ಶಾಸಕರು ಕುಮಾರಸ್ವಾಮಿಯವರನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
 
ಜೂನ್ 12 ರಂದು ಜೆಡಿಎಸ್ ಪಕ್ಷದ ಸಭೆ ನಡೆಯಲಿದ್ದು ಅಡ್ಡ ಮತದಾನ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಕಾಂಗ್ರೆಸ್ ಪಕ್ಷದ ಮೂರನೇ ಕೇವಲ 32 ಮತಗಳು ಲಭ್ಯವಿವೆ. ಆದಾಗ್ಯೂ, ಜೂನ್ 11 ರಂದು ಚುನಾವಣೆ ನಡೆಸುವಂತೆ ಸಲಹೆ ನೀಡುತ್ತಿದೆ. ಇದು ಕುದುರೆ ವ್ಯಾಪರವಲ್ಲದೇ ಕತ್ತೆ ವ್ಯಾಪಾರವೇ? ಎಂದು ಪ್ರಶ್ನಿಸಿದ್ದಾರೆ.
 
ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ವೋಟಿಗಾಗಿ ನೋಟು ಘಟನೆಯ ರೂವಾರಿಯಾಗಿದ್ದು, ಹೆಚ್ಚುವರಿ ಮತಗಳನ್ನು ಪಡೆಯಲು ಹಣದ ವ್ಯವಹಾರ ಮಾಡುತ್ತಿದ್ದಾರೆ. ಜೆಡಿಎಸ್ ಪಕ್ಷವನ್ನು ಮುಗಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. 
 
ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಖಾನ್ ಕೂಡಾ ಕುದುರೆ ವ್ಯಾಪಾರದಲ್ಲಿ ತೊಡಗಿದ್ದು, ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಗುಡುಗಿದರು.
 
ಮತದಾನ ಮುಕ್ತಾಯಗೊಂಡ ನಂತರ ಜಮೀರ್ ಅಹ್ಮದ್, ಚಲುವರಾಯಸ್ವಾಮಿ, ಅಖಂಡ ಶ್ರೀನಿವಾಸ್, ಇಕ್ಬಾಲ್ ಅನ್ಸಾರಿ ಮತ್ತು ಬಾಲಕೃಷ್ಣ ಹಾವೆ ವಿರುದ್ಧ ಯಾವ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎನ್ನುವುದನ್ನು ಹೇಳುತ್ತೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments