Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿಕೆ ಶಿವಕುಮಾರ್‌

ಜಾತಿ ಗಣತಿ

Sampriya

ಬೆಂಗಳೂರು , ಗುರುವಾರ, 1 ಮೇ 2025 (16:35 IST)
ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳಿದ್ದರು. ಇದೀಗ ರಾಹುಲ್ ಅವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ. ಕೇಂದ್ರ ಸರ್ಕಾರ ಜಾತಿಗಣತಿ ನಡೆಸಲು ನಿರ್ಧರಿಸಿರುವ ಬಗ್ಗೆ ಪ್ರತಿಕ್ರಿಯಿಸಿದರು.

ಜಾತಿಗಣತಿಗೆ ಇಂತಿಷ್ಟು ಸಮಯ ಎಂದು ನಿಗದಿ ಮಾಡಿ ಪೂರ್ಣಗೊಳಿಸಬೇಕು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದು. ಇದರಂತೆ ಕೇಂದ್ರ ಸರ್ಕಾರ ನಡೆದುಕೊಳ್ಳಬೇಕು.

ಸಮಾಜದ ಎಲ್ಲಾ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದರೆ ಜನಸಂಖ್ಯೆಯ ಆಧಾರದ ಮೇಲೆ ದೇಶದ ಜನರಿಗೆ ಸೌಲಭ್ಯಗಳನ್ನು ನೀಡಬೇಕು ಎಂಬುದು ಕಾಂಗ್ರೆಸ್ ಪಕ್ಷದ ಮೂಲ ಆಶಯ, ಸಿದ್ಧಾಂತ,‌ ಬೇಡಿಕೆಯಾಗಿದೆ.

ಮುಖ್ಯಮಂತ್ರಿಗಳು ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರ ಇದಕ್ಕೆ ಬೇಕಾದಂತಹ ಸಹಕಾರ ನೀಡಲಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಪಾಕಿಸ್ತಾನದ ಜೊತೆ ಮಾತುಕತೆ ಮಾಡಿ ಎಂದ ಅಮೆರಿಕಾಗೆ ಒಂದೇ ಮಾತಲ್ಲಿ ಉತ್ತರ ಕೊಟ್ಟ ಸಚಿವ ಎಸ್ ಜೈಶಂಕರ್