Publish Date: Thu, 23 Nov 2023 (18:21 IST)
Updated Date: Thu, 23 Nov 2023 (18:53 IST)
180 ಕೋಟಿ ರು. ವೆಚ್ಚ ಮಾಡಿ ನಡೆಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯ ಮೂಲಪ್ರತಿ ಕಾಣೆಯಾಗಲು ಕಾರಣರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಈ ಸಂಬಂಧ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರಿಗೆ ಪತ್ರ ಬರೆದಿರುವ ಅವರುಈ ಕೂಡಲೇ ವರದಿ ನೈಜತೆಯ ಬಗ್ಗೆ ತನಿಖೆ ಮಾಡಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.