Publish Date: Sun, 10 Feb 2019 (17:58 IST)
Updated Date: Sun, 10 Feb 2019 (18:00 IST)
ಬಿ.ಎಸ್.ಯಡಿಯೂರಪ್ಪ ಅವರು ನಡೆಸಿರುವ ಸಂಭಾಷಣೆಯ ಆಡಿಯೋ ಕುರಿತು ಹಾಗೂ ಆಪರೇಷನ್ ಕಮಲದ ಬಗ್ಗೆ ನಾಳೆ ಸದನದಲ್ಲಿ ಬಿಸಿ ಬಿಸಿ ಚರ್ಚೆ ನಡೆಯಲಿದೆ.
ಬಿ.ಎಸ್.ವೈ ಆಡಿಯೋವನ್ನು ಸಿಎಂ ಕುಮಾರಸ್ವಾಮಿ ಬಿಡುಗಡೆಗೊಳಿಸಿದ್ದರು. ಎರಡು ದಿನಗಳ ಬಳಿಕ ಆಡಿಯೋದಲ್ಲಿ ಮಾತನಾಡಿರುವ ಧ್ವನಿ ನನ್ನದೇ ಎಂದು ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಏತನ್ಮಧ್ಯೆ ಆಡಿಯೋ ವಿಷಯವನ್ನು ಸದನದಲ್ಲಿ ಚರ್ಚೆ ನಡೆಸಲಾಗುತ್ತದೆ. ಹೀಗಂತ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ ಹೇಳಿದ್ದಾರೆ.
ಆಪರೇಷನ್ ಕಮಲದ ಕುರಿತು ಗೊತ್ತೇ ಇಲ್ಲ ಎಂದ ಅವರು, ನಾನು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಮನಸ್ಸಿಗೆ ಘಾಸಿಗೊಳಿಸಿವೆ ಎಂದು ರಾಯಚೂರಿನಲ್ಲಿ ಹೇಳಿದ್ದಾರೆ.