Select Your Language

Notifications

webdunia
webdunia
webdunia
webdunia

ಸರ್ವಾನುಮತ ನಿರ್ಣಯದಿಂದ ಸುಪ್ರೀಂ ಆದೇಶ ಧಿಕ್ಕರಿಸಿದಂತಾಗಲ್ಲ: ಕುಮಾರಸ್ವಾಮಿ

ಸರ್ವಾನುಮತ ನಿರ್ಣಯದಿಂದ ಸುಪ್ರೀಂ ಆದೇಶ ಧಿಕ್ಕರಿಸಿದಂತಾಗಲ್ಲ: ಕುಮಾರಸ್ವಾಮಿ
ಬೆಂಗಳೂರು , ಶುಕ್ರವಾರ, 23 ಸೆಪ್ಟಂಬರ್ 2016 (20:22 IST)
ವಿವಾದಕ್ಕೆ ಸಂಬಂಧಿಸಿದಂತೆ ಇಂದು ವಿಶೇಷ ವಿಧಾನ ಮಂಡಲ ಅಧಿವೇಶನ ಕರೆಯಲಾಗಿತ್ತು. ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸದಂತೆ ಸರ್ವಾನುಮತ ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಧಾರದಿಂದ ನ್ಯಾಯಾಲಯದ ಆದೇಶ ಧಿಕ್ಕರಿಸಿದಂತಾಗಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇದು ತಾತ್ಕಾಲಿಕ ಹೋರಾಟ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
 
ವಿಶೇಷ ವಿಧಾನ ಮಂಡಲ ಅಧಿವೇಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಕಾವೇರಿ ವಿವಾದ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಹೋರಾಟ ಮುಂದುವರೆಸಲಾಗುತ್ತದೆ ಎಂದು ಹೇಳಿದರು.
 
ಕಾವೇರಿ ನೀರು ಹಂಚಿಕೆಗೆ ವಿಷಯವಾಗಿ ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟಿನಿಂದ ಇರಬೇಕು. ನೆಲ ಹಾಗೂ ಜಲದ ವಿಷಯದಲ್ಲಿ ಯಾರು ರಾಜಕೀಯ ಮಾಡಬಾರದು ಎಂದು ತಿಳಿಸಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

4ಜಿ ಬಳಕೆದಾರರಿಗೆ 3 ತಿಂಗಳ ಉಚಿತ ಡೇಟಾ ಸೇವೆ: ಏರ್‌ಟೆಲ್