Select Your Language

Notifications

webdunia
webdunia
webdunia
webdunia

ಕಾವೇರಿ ನದಿ ನೀರು ಹಂಚಿಕೆ ವಿವಾದ: ಜ.4ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

ಕಾವೇರಿ ನದಿ ನೀರು ಹಂಚಿಕೆ ವಿವಾದ: ಜ.4ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
ಬೆಂಗಳೂರು , ಗುರುವಾರ, 15 ಡಿಸೆಂಬರ್ 2016 (17:55 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಿಶೇಷ ಮೇಲ್ಮನವಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಚಾರಣೆಯನ್ನು ಜನವರಿ 4ಕ್ಕೆ ಮುಂದೂಡಿದೆ.
ಕಾವೇರಿ ಟ್ರಿಬ್ಯೂನಲ್‌ನ ಐ-ತೀರ್ಪು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳ ಸರಕಾರ ವಿಶೇಷ ಮೇಲ್ಮನವಿಗಳನ್ನು ಸಲ್ಲಿಸಿದ್ದವು.
 
ಮೂರು ರಾಜ್ಯಗಳು ಸಲ್ಲಿಸಿರುವ ವಿಶೇಷ ಮೇಲ್ಮನವಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಚಾರಣೆಯನ್ನು ಜನವರಿ 4ಕ್ಕೆ ಮುಂದೂಡಿ ಯಥಾಸ್ಥಿತಿಯನ್ನು ಮುಂದುವರೆಸುವಂತೆ ಆದೇಶ ನೀಡಿದೆ. 
 
ನಿತ್ಯ ಕಾವೇರಿಯಿಂದ ತಮಿಳುನಾಡಿಗೆ 2 ಸಾವಿರ ಕ್ಯೂಸೆಕ್ ನೀರು......
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆ ನಡೆಯುವವರೆಗೂ ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

2016ರ ಸ್ಯಾಂಡಲ್‌ವುಡ್ ಮೇರು ನಟರ ಸಾಧನೆ.