Publish Date: Mon, 03 Oct 2016 (11:55 IST)
Updated Date: Mon, 03 Oct 2016 (11:57 IST)
ಕಾವೇರಿ ನಿರ್ವಹಣಾ ಮಂಡಳಿ ರಚನೆ ಸದ್ಯಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರಕಾರ ಆಕ್ಷೇಪಣೆ ಅರ್ಜಿ ಸಲ್ಲಿಸಿದೆ.
ಅಂತರಾಜ್ಯಗಳ ಜಲ ವಿವಾದದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡುವಂತಿಲ್ಲ. ಹಾಗೂ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಸೂಚನೆ ನೀಡುವ ಅಧಿಕಾರ ನ್ಯಾಯಲಯಕ್ಕಿಲ್ಲ ಎಂದು ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಆಕ್ಷೇಪಣೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 30 ರಂದು ನಡೆದ ವಿಚಾರಣೆಯಲ್ಲಿ ಕೇವಲ ನಾಲ್ಕು ದಿನಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಕೇಂದ್ರ ಸರಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿತ್ತು.
ಕಾವೇರಿ ನಿರ್ವಹಣಾ ಮಂಡಳಿ ರಚನೆ ಆದ್ರೆ ರಾಜ್ಯಕ್ಕೆ ಅನ್ಯಾಯವಾಗುತ್ತದೆ ಎಂದು ರಾಜ್ಯಾದ್ಯಂತ ಮಂಡಳಿ ರಚನೆಗೆ ವಿರೋಧ ವ್ಯಕ್ತವಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ