Select Your Language

Notifications

webdunia
webdunia
webdunia
webdunia

ಕಾವೇರಿ ವಿವಾದ: ಪ್ರತಿಭಟನೆ ಹೆಸರಿನಲ್ಲಿ ಹಿಂಸಾಚಾರ ಸಹಿಸಲು ಸಾಧ್ಯವಿಲ್ಲ

Cauvery dispute: The court order like hit by stick Government said R. Ashok ಕನ್ನಡ ಪ್ರಾದೇಶಿಕ
ನವದೆಹಲಿ , ಮಂಗಳವಾರ, 13 ಸೆಪ್ಟಂಬರ್ 2016 (11:03 IST)
ಕಾವೇರಿ ನೀರಿಗಾಗಿ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರತಿಭಟನೆ ಹೆಸರಿನಲ್ಲಿ ಹಿಂಸಾಚಾರ ಸಹಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದರು.
 
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಬೇಕು. ಶಾಂತಿ ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವುದು ಪ್ರತಿಯೊಬ್ಬರ ಧರ್ಮ. ಉಭಯ ರಾಜ್ಯಗಳು ಶಾಂತಿ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು.
 
ಯಾವುದೇ ವಿವಾದವನ್ನು ರಸ್ತೆಯಲ್ಲಿ ಬಗೆಹರಿಸಲು ಸಾಧ್ಯವಿಲ್ಲ. ಕಾವೇರಿ ವಿಚಾರದಲ್ಲಿ ಸಾರ್ವಜನಿಕರನ್ನು ಪ್ರಚೋದಿಸುವ ಕೆಲಸ ಮಾಡಬಾರದು. ಬೇರೆ ರಾಜ್ಯದ ಜನರಿಗೆ ರಕ್ಷಣೆ ಒದಗಿಸುವಂತೆ ಕರ್ನಾಟಕ ಹಾಗೂ ತಮಿಳುನಾಡು ಸರಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಸೂಚನೆ ನೀಡಿದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ವಿವಾದ: ನ್ಯಾಯಧೀಕರಣದಿಂದ ರಾಜ್ಯಕ್ಕೆ ಮಾರಣಾಂತಿಕ ತೀರ್ಪು ಎಂದ ಆರ್.ಅಶೋಕ್