ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕಾಗಿ ಒತ್ತಡ ಹೇರಲು ರಾಜ್ಯ ಸರಕಾರ ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗಾಗಿ ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಗೆ ತೆರಳಲಿದ್ದಾರೆ. ಆದರೆ, ಮೋದಿ ಭೇಟಿಗೆ ಸಮಯ ನಿಗದಿಯಾಗಿಲ್ಲ. ಇಂದೇ ಅವರ ಭೇಟಿಗೆ ಅವಕಾಶ ಸಿಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ನಡೆದ ಮಂತ್ರಿ ಪರಿಷತ್ ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಿಸಿ ಉಭಯ ರಾಜ್ಯಗಳ ನಡುವಿನ ಬಿಕ್ಕಟ್ಟು ಶಮನಗೊಳಿಸಬೇಕು ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ