Publish Date: Fri, 16 Feb 2018 (10:29 IST)
Updated Date: Fri, 16 Feb 2018 (10:31 IST)
ಬೆಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಕೆಲವೇ ಕ್ಷಣಗಳಲ್ಲಿ ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದ ಅಂತಿಮ ತೀರ್ಪು ಬರಲಿರುವ ಹಿನ್ನಲೆಯಲ್ಲಿ ಡಿಜಿಪಿ ನೀಲಮಣಿ ರಾಜು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ.
ಸಿಎಂ ಅಧಿಕೃತ ನಿವಾಸಕ್ಕೆ ಬಂದ ಡಿಜಿಪಿ ನೀಲಮಣಿ ರಾಜು ಭದ್ರತೆ ಬಗ್ಗೆ ವಿವರಣೆ ನೀಡಿದ್ದಾರೆ. ಅಷ್ಟೇ ಅಲ್ಲದೆ, ತೀರ್ಪು ವ್ಯತಿರಿಕ್ತವಾಗಿ ಬಂದರೆ ನಡೆಯಬಹುದಾದ ಪ್ರತಿಭಟನೆ ಕೈ ಮೀರಿ ಹೋಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ