ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಮತ್ತೆ ಭುಗಿಲೆದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಾದ್ಯಂತ ಸೆಕ್ಷನ್ 144 ಕಲಂ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಮೇಘರಿಕ್ ಆದೇಶ ಹೊರಡಿಸಿದ್ದಾರೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಎರಡು ದಿನಗಳಿಂದ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಯುತ್ತಿದ್ದು, ಕನ್ನಡಿಗರ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಲಾಗುತ್ತಿದೆ. ಹಾಗೂ ಇಂದು ಕಾವೇರಿ ನದಿಯಿಂದ ಪ್ರತಿ ದಿನ 12 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಸುಪ್ರೀ ಕೋರ್ಟ್ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಕ್ಷ ಉಗ್ರ ಪ್ರತಿಭಟನೆ ಕೈಗೊಳ್ಳಲಾಗಿದೆ.
ತಮಿಳುನಾಡಿನ ಕರ್ನಾಟಕ ಮೂಲದ ವುಡ್‌ಲ್ಯಾಂಡ್ ಹೋಟೆಲ್ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಕಿಡಿಗೇಡಿಗಳು ದೌರ್ಜನ್ಯ ಎಸಗಿದ್ದಾರೆ. ಕರ್ನಾಟಕದಿಂದ ತೆರಳಿದ ಭಕ್ತರ ಮೇಲೆ ಹಲ್ಲೆ ಮಾಡುವ ಮೂಲಕ ಅಟ್ಟಹಾಸ ಮೇರೆದಿರುವ ಘಟನೆಗಳು ವರದಿಯಾಗಿದೆ.
ತಮಿಳುನಾಡಿಗೆ ನೀರು ಬಿಡುವಂತೆ ಹೊರಡಿಸಿದ ಆದೇಶವನ್ನು ಮಾರ್ಪಡಿಸುವಂತೆ ಕೋರಿ ಸೆಪ್ಟೆಂಬರ್ 10ರಂದು ರಾಜ್ಯ ಸರಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಮುಂಜಾನೆ 11 ಗಂಟೆಗೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ