Webdunia - Bharat's app for daily news and videos

Install App

ಕಾವೇರಿಗಾಗಿ ಜೈಲಿಗೆ ಹೋಗಲು ನಾವು ರೆಡಿ, ನೀವು ರೆಡಿನಾ?: ಸಿಎಂಗೆ ಈಶ್ವರಪ್ಪ ಸವಾಲ್

Webdunia
ಸೋಮವಾರ, 19 ಸೆಪ್ಟಂಬರ್ 2016 (16:48 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿಟ್ಟ ನಿರ್ಧಾರ ಕೈಗೊಳ್ಳಲಿ ನಿಮ್ಮ ಜೊತೆ ಜೈಲಿಗೆ ಹೋಗಲು ನಾವು ಸಿದ್ಧರಿದ್ದೇವೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.
 
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮೇಲುಸ್ತುವಾರಿ ಸಮಿತಿ ಸಭೆಯ ತೀರ್ಪಿನಿಂದ ರಾಜ್ಯಕ್ಕೆ ಹಿನ್ನೆಡೆಯಾದರೇ ನ್ಯಾಯಾಂಗ ನಿಂದನೆ ಎದುರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಸಿದ್ಧವಿರಬೇಕು. ಯಾವುದೇ ಕಾರಣಕ್ಕೂ ರೈತರ ಹಿತ ಬಲಿ ಕೊಟ್ಟು ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಗ್ರಹಿಸಿದರು. 
 
ಕಾವೇರಿ ಗಲಭೆ ಹಿಂದೆ ಆರ್‌ಎಸ್‌ಎಸ್ ಆರೋಪ.....
 
ಕಾವೇರಿ ಗಲಭೆಯ ಹಿಂದೆ ಆರ್‌ಎಸ್‌ಎಸ್ ಕೈವಾಡವಿದೆ ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹೇಳುತ್ತಾರೆ. ಈಗ ನಾನು ಆ ರೀತಿಯ ಹೇಳಿಕೆ ನೀಡಿಲ್ಲ ಎನ್ನುತ್ತಾರೆ. ಸಂಘಟನೆಯ ಕುರಿತು ತಿಳಿದುಕೊಳ್ಳದೇ ಹೇಳಿಕೆ ನೀಡುವುದು ಸರಿಯಲ್ಲ ಎಂದು ಕಿಡಿಕಾರಿದರು. 
 
ಕೆ.ಜೆ.ಜಾರ್ಜ್‌ಗೆ ಕ್ಲೀನ್ ಚೀಟ್.....
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ್ಯ ಆರೋಪಿಯಾಗಿದ್ದ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರನ್ನು ಕೈ ಬಿಡಲಾಗಿದೆ. ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಉದ್ದೇಶದಿಂದ ರಾಜ್ಯ ಸರಕಾರ ಕೊಲೆಗಡುಕರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಜಾರ್ಜ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಾರದು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments