Publish Date: Mon, 03 Oct 2016 (12:34 IST)
Updated Date: Mon, 03 Oct 2016 (15:33 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆಯ ಆದೇಶವೇ ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಅಂತರ ರಾಜ್ಯ ಜಲ ವಿವಾದಕ್ಕೆ ಸಂಬಂಧಿಸಿದಂತೆ ನಿರ್ವಹಣಾ ಮಂಡಳಿ ರಚನೆ ಆದೇಶ ಶಾಸಕಾಂಗದ ಹಕ್ಕು. ಮಂಡಳಿ ರಚನೆಯ ಬಳಿಕ ಸದಸ್ಯರ ಹೆಸರುಗಳನ್ನು ಕಳುಹಿಸಬೇಕು. ಆದರೆ, ಮೊದಲೇ ಸದಸ್ಯರ ಹೆಸರುಗಳನ್ನು ಕಳುಹಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಈ ಎಲ್ಲ ಅಂಶಗಳನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುತ್ತೇವೆ ಎಂದರು.
ಕಾವೇರಿ ನಿರ್ವಹಣಾ ಮಂಡಳಿ ರಚನೆಯಾಗಲು ಬಿಡುವುದಿಲ್ಲ. ಮಂಡಳಿ ರಚನೆಗೆ ನಮ್ಮ ತೀವ್ರ ವಿರೋಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 30 ರಂದು ನಡೆದ ವಿಚಾರಣೆಯಲ್ಲಿ ಕೇವಲ ನಾಲ್ಕು ದಿನಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಕೇಂದ್ರ ಸರಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ