Select Your Language

Notifications

webdunia
webdunia
webdunia
webdunia

ಡಿಕೆ ಶಿವಕುಮಾರ್‌ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಿಬಿಐ ಅರ್ಜಿ, ಪ್ರಕರಣದ ಮಾಹಿತಿ ಇಲ್ಲಿದೆ

DCM DK Shivkumar, MLA Basanagowda Patil Yatnal, Supream Court

Sampriya

ಬೆಂಗಳೂರು , ಸೋಮವಾರ, 21 ಅಕ್ಟೋಬರ್ 2024 (16:51 IST)
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಸರ್ಕಾರ ಸಿಬಿಐ ತನಿಖೆ ನೀಡಿದ್ದ ಆದೇಶವನ್ನು ಹಿಂಪಡೆದಿದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಬಿಐ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

ಬಿಜೆಪಿ ಶಾಸಕ ಯತ್ನಾಳ್‌ ಅರ್ಜಿ ವಿಚಾರಣೆ ವೇಳೆ ಈ ಪ್ರಕರಣದ ವಿಚಾರಣೆಯಲ್ಲಿ ಭಾಗಿಯಾಗುವ ಬಗ್ಗೆ ಕೋರ್ಟ್ ಸಿಬಿಐ ಅಭಿಪ್ರಾಯ ಕೇಳಿತ್ತು. ಕೋರ್ಟ್ ಅಭಿಪ್ರಾಯ ಕೇಳಿದ್ದ ಹಿನ್ನೆಲೆಯಲ್ಲಿ ಸಿಬಿಐನಿಂದಲೂ ಈಗ ಅರ್ಜಿ ಸಲ್ಲಿಕೆಯಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಿಬಿಐ ತನಿಖೆಗೆ ನೀಡಿದ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಶಾಸಕ ಬಸನಗೌಡ ಯತ್ನಾಳ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿತ್ತು.

ರಾಜ್ಯ ಸರ್ಕಾರ ನೀಡಿರುವ ಲೋಕಾಯುಕ್ತ ತನಿಖೆಗೆ ತಡೆ ನೀಡಬೇಕು ಮತ್ತು ಸರ್ಕಾರ ಮಾಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಯತ್ನಾಳ್ ಪರ ವಕೀಲರು ಮನವಿ ಮಾಡಿದ್ದರು.

ಲೋಕಾಯುಕ್ತ ತನಿಖೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತು. ಒಂದು ವೇಳೆ ತನಿಖೆ ನ್ಯಾಯಬದ್ಧವಾಗಿಲ್ಲ ಎಂದಾದರೆ ಮತ್ತೆ ಸುಪ್ರೀಂಕೋರ್ಟ್ ಸಂಪರ್ಕ ಮಾಡಬಹುದು ಎಂದು ಸೂಚಿಸಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಚನ್ನಪಟ್ಟಣದಲ್ಲಿ ನಾವೇ ಗೆಲ್ಲೋದು: ಸಿಎಂ ಸಿದ್ದರಾಮಯ್ಯ