ಒಂದೆಡೆ ರಾಜ್ಯದ ಉಪಚುನಾವಣೆ ಕಾವು ರಂಗೇರಿದೆ. ಮತ್ತೊಂದೆಡೆ ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ಸದ್ದು ಜೋರಾಗಿದೆ. ಈ ನಡುವೆ ಕೈ ಪಾಳೆಯಕ್ಕೆ ಸಿಬಿಐ ರೇಡ್ ಶಾಕ್ ನೀಡಿದೆ.
ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆದಿದೆ.
ರಾಜ್ಯ ಕಾಂಗ್ರೆಸ್ ನಾಯಕತ್ವ ವಹಿಸಿರುವ ಡಿ.ಕೆ.ಶಿವಕುಮಾರ್ ಅವರ ರಾಜ್ಯದ, ದೆಹಲಿಯಲ್ಲಿನ ಹಾಗೂ ಮುಂಬೈನ ಒಂದು ಸ್ಥಳ ಸೇರಿದಂತೆ 14 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಸಿಬಿಐ ತಂಡವು ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಕೇಸ್ ದಾಖಲು ಮಾಡಿದೆ. ಶೋಧ ನಡೆಸುವ ವೇಳೆಯಲ್ಲಿ 50 ಲಕ್ಷ ರೂಪಾಯಿಗಳನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ ಎನ್ನಲಾಗಿದೆ.