Publish Date: Sat, 09 Sep 2017 (17:12 IST)
Updated Date: Sat, 09 Sep 2017 (17:16 IST)
ಯಾವುದೇ ಕಾರಣಕ್ಕೂ ಸಿಬಿಐ ತನಿಖೆ ಬೇಡ. ಎಸ್‍ಐಟಿ ತನಿಖೆ ಮುಂದುವರಿಯಲಿ ಎಂದು ಗೌರಿ ಲಂಕೇಶ್ ತಾಯಿ ಇಂದಿರಾ ಲಂಕೇಶ್, ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ.
ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅಧಿತ ನಿವಾಸವಾದ ಕಾವೇರಿಗೆ ಆಗಮಿಸಿ ಚರ್ಚೆ ನಡೆಸಿದ ಇಂದಿರಾ ಲಂಕೇಶ್, ಸಿಬಿಐ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ. ವಿಶೇಷ ತನಿಖಾ ತಂಡದಿಂದಲೇ ಮುಂದುವರಿಯಲಿ ಎಂದು ಕೋರಿದ್ದಾರೆ.
ಗೌರಿ ಲಂಕೇಶ್ ತಾಯಿ ಇಂದಿರಾ ಲಂಕೇಶ್ ಅವರಿಗೆ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯ, ಆದಷ್ಟು ಬೇಗ ಹಂತಕರನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದ್ದಾಗಿ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಗೌರಿ ಲಂಕೇಶ್ ಸಹೋದರ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಹೋದರಿ ಗೌರಿ ಲಂಕೇಶ್ ಹತ್ಯೆಯ ತನಿಖೆ ಸಿಬಿಐ ಸಂಸ್ಥೆಯಿಂದಾಗಲಿ ಎಂದು ಒತ್ತಾಯಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.