Publish Date: Mon, 19 Dec 2022 (14:33 IST)
Updated Date: Mon, 19 Dec 2022 (16:35 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿರುವ ಗ್ಲೋಬಲ್ ಕಾಲೇಜಿನ ಮೇಲೆ ಸಿಬಿಐ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದೆ. ಆಸ್ತಿ ಮೌಲ್ಯಮಾಪನ ಕಾರ್ಯ ನಡೆಸಲಾಗುತ್ತಿದೆ.
ಕಳೆದೆರಡು ತಿಂಗಳ ಹಿಂದೆ ರಾಮನಗರದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು. ಸಿಬಿಐ ಅಧಿಕಾರಿಗಳು ಈಗ ಡಿಕೆಶಿ ಮಾಲೀಕತ್ವದ ಎಲ್ಲಾ ಆಸ್ತಿಗಳ ಮೌಲ್ಯಮಾಪನ ಮಾಡುತ್ತಿದ್ದಾರೆ. ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಮೌಲ್ಯಮಾಪನ ನಡೆಸಲಾಗುತ್ತಿದೆ.