Webdunia - Bharat's app for daily news and videos

Install App

ಪರೇಶ್‍ ಸಾವಿನ ಪ್ರಕರಣ ಸಿಬಿಐ ತನಿಖೆಗೆ- ರಾಮಲಿಂಗಾರೆಡ್ಡಿ

Webdunia
ಬುಧವಾರ, 13 ಡಿಸೆಂಬರ್ 2017 (19:46 IST)
ಹಿಂದೂ ಸಂಘಟನೆಯ ಕಾರ್ಯಕರ್ತ ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
 
ಪರಪ್ಪನ ಅಗ್ರಹಾರ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಸಭೆ ಚುನಾವಣೆಯನ್ನು ಮುಂದಿಟ್ಟುಕೊಂಡು ಅನಗತ್ಯ ಆರೋಪಗಳನ್ನು ಮಾಡುತ್ತಿದೆ. ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪ್ರಕರಣದಲ್ಲೂ ಬಿಜೆಪಿ ಹೀಗೆ ಮಾಡಿತ್ತು. ಕೊನೆಗೆ ಸಿಬಿಐ ಸಹ ಕ್ಲೀನ್ ಚಿಟ್ ನೀಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಪರೇಶ್ ಮೇಸ್ತಾ ಮರಣೋತ್ತರ ಪರೀಕ್ಷಾ ವರದಿ ಬರಲು ಇನ್ನು 8ರಿಂದ 10 ದಿನ ಬೇಕು. ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿಯುತ್ತದೆ. ಪರಮೇಶ್ ಮೇಸ್ತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
 
ಬಿಜೆಪಿ ನಾಯಕರ ಒತ್ತಾಯಕ್ಕೆ ಮಣಿದು ನಾವು ಪ್ರಕರಣವನ್ನು ಸಿಬಿಐಗೆ ವಹಿಸುತ್ತಿಲ್ಲ. ಮೇಸ್ತಾ ಅವರ ಕುಟುಂಬದ ಒತ್ತಾಸೆಯಂತೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗುವುದು ಎಂದು ಹೇಳಿದ್ದಾರೆ.
 
ಪರೇಶ್ ಸಾವಿನ ಪ್ರಕರಣ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿತ್ತು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments