Webdunia - Bharat's app for daily news and videos

Install App

PSI ಪರಶುರಾಮ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿ ತಿಮ್ಮೇಗೌಡ ನೇಣಿಗೆ ಶರಣು

Krishnaveni K
ಸೋಮವಾರ, 5 ಆಗಸ್ಟ್ 2024 (11:32 IST)
ಬೆಂಗಳೂರು: ಪಿಎಸ್ ಐ ಪರಶುರಾಮ್ ಅನುಮಾನಾಸ್ಪದ ಸಾವು ವಿವಾದಲ್ಲಿರುವಾಗಲೇ ಈಗ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಎಂಬವರು ನೇಣಿಗೆ ಶರಣಾಗಿದ್ದು ದೊಡ್ಡ ವಿವಾದವಾಗುವ ಲಕ್ಷಣಗಳಿವೆ.

ವಾಲ್ಮೀಕಿ ನಿಗಮ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಬಳಿಕ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಅಧಿಕಾರಿಗಳ ವರ್ಗಾವಣೆಗೆ ಕಮಿಷನ್ ವ್ಯವಹಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಪೇದೆಯಿಂದ ಹಿಡಿದು ದೊಡ್ಡ ಹಂತದ ಅಧಿಕಾರಿವರೆಗೆ ವರ್ಗಾವಣೆಗೆ ಇಂತಿಷ್ಟು ಎಂದು ಕಮಿಷನ್ ಫಿಕ್ಸ್ ಆಗಿದೆ ಎಂಬ ಆರೋಪ ಕೇಳಿಬರುತ್ತಿದೆ.

ಇದರ ಬೆನ್ನಲ್ಲೇ  ಈಗ ಸಿಸಿಬಿ ಅಧಿಕಾರಿ ತಿಮ್ಮೇಗೌಡ ಸಾವನ್ನಪ್ಪಿರುವುದು ಅನುಮಾನಕ್ಕೆ ಕಾರಣವಾಗಿದೆ. ಬಿಡದಿ ಬಳಿ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು.

ತಿಮ್ಮೇಗೌಡ ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ. ಪೊಲಸರು ತನಿಖೆ ನಡೆಸಲಿದ್ದಾರೆ. ಆದರೆ ಈ ಪ್ರಕರಣ ವಿಪಕ್ಷಗಳಿಗೆ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಪ್ರಬಲ ಅಸ್ತ್ರ ಸಿಕ್ಕಂತಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments