Select Your Language

Notifications

webdunia
webdunia
webdunia
webdunia

ಪಬ್, ಹುಕ್ಕಾ ಬಾರ್ ಮೇಲೆ ಸಿಸಿಬಿ ಪೊಲೀಸರ ದಾಳಿ

ಪಬ್, ಹುಕ್ಕಾ ಬಾರ್  ಮೇಲೆ ಸಿಸಿಬಿ ಪೊಲೀಸರ ದಾಳಿ
bangalore , ಭಾನುವಾರ, 10 ಸೆಪ್ಟಂಬರ್ 2023 (13:42 IST)
ಅಪ್ರಾಪ್ತ ಮಕ್ಕಳಿಗೆ ಮದ್ಯ ನೀಡುವುದು, ಡ್ರಗ್ಸ್ ಸರಬರಾಜು ಸೇರಿ ವಿವಿಧ ಕಾರಣಗಳಿಗೆ ಬೆಂಗಳೂರಿನಾದ್ಯಂತ ತಡರಾತ್ರಿ ಸಿಸಿಬಿ ಪೊಲೀಸರು ಪಬ್ಗಳ ಮೇಲೆ ದಾಳಿ ನಡೆಸಿದ್ದಾರೆ. ನಿನ್ನೆ ಸಂಜೆಯಿಂದ ತಡರಾತ್ರಿವರೆಗೆ ನಗರದ ಒಟ್ಟು 500ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ CCB ಎಲ್ಲಾ ಸಿಬ್ಬಂದಿ ಭಾಗಿಯಾಗಿದ್ದರು. ಪಬ್, ಹುಕ್ಕಾ ಬಾರ್ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಹಲವಾರು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಪ್ರಾಪ್ತರು ನಕಲಿ ಆಧಾರ್ ಕಾರ್ಡ್ ಬಳಕೆ ಮಾಡಿಕೊಂಡು ಪಬ್ ಹೋಗಿರುವುದು ಪತ್ತೆಯಾಗಿದೆ. ಡಿಜಿಟಲ್ ನಕಲಿ ಆಧಾರ್ ಕಾರ್ಡ್ಗಳನ್ನು ಸಿಸಿಬಿ ಪತ್ತೆ ಮಾಡಿದ್ದು,  ಅಪ್ರಾಪ್ತರು ಡ್ರಗ್ಸ್ ಸೇವನೆ ಮಾಡಿರುವುದು ಸಹ ಪತ್ತೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

G20 ಒಕ್ಕೂಟಕ್ಕೆ ಆಫ್ರಿಕನ್ ಯೂನಿಯನ್ ಸೇರ್ಪಡೆ