ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಮಾತ್ರವಲ್ಲ: ನಟಿಮಣಿಯರನ್ನಿಟ್ಟುಕೊಂಡು ಈ ದಂಧೆಯೂ ನಡೆಯುತ್ತಿತ್ತು

Krishnaveni K
ಬುಧವಾರ, 22 ಮೇ 2024 (11:36 IST)
Photo Courtesy: Twitter
ಬೆಂಗಳೂರು: ಮೊನ್ನೆ ಬೆಂಗಳೂರಿನ ಜಿಆರ್ ಫಾರ್ಮ್ ಹೌಸ್‍ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿದ್ದ ಪೊಲೀಸರು ಡ್ರಗ್ಸ್ ವಶಪಡಿಸಿಕೊಂಡಿದ್ದರು. ಈ ವೇಳೆ ಕೆಲವು ತೆಲುಗೂ ನಟಿಯರೂ ಸಿಕ್ಕಿ ಹಾಕಿಕೊಂಡಿದ್ದರು.

ಪ್ರಕರಣವನ್ನು ಇದೀಗ ಸಿಸಿಬಿಗೆ ವರ್ಗಾಯಿಸಲಾಗಿದೆ. ಸಿಸಿಬಿ ಆಂಟಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳಿಂದ ತನಿಖೆ ನಡೆಸಲಾಗುತ್ತಿದೆ. ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ಈ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಮಾತ್ರವಲ್ಲ, ಸೆಕ್ಸ್ ದಂಧೆಯೂ ನಡೆಯುತ್ತಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ.

ನಟಿಯರನ್ನು ಬಳಸಿಕೊಂಡು ಮಾಂಸ ದಂಧೆಯೂ ನಡೆಯುತ್ತಿತ್ತು ಎಂಬ ಶಾಕಿಂಗ್  ವಿಚಾರ ಬಯಲಿಗೆ ಬಂದಿದೆ. ವಾಸು ಬರ್ತ್ ಡೇ ಪಾರ್ಟಿ ಎಂಬ ಬೋರ್ಡ್ ಹಾಕಿ ಇಷ್ಟೆಲ್ಲಾ ದಂಧೆ ನಡೆಸಲಾಗಿತ್ತು. ಒಬ್ಬ ವ್ಯಕ್ತಿಗೆ ಎರಡು ಲಕ್ಷ ರೂ.ನಂತೆ ಹಣ ಪಡೆಯಲಾಗಿದೆ. ಪಾರ್ಟಿಯಲ್ಲಿ ಪಾಲ್ಗೊಳ್ಳುವವರಿಗೆ ಡ್ರಗ್ಸ್ ವಿಚಾರವಾಗಿ ಎಲ್ಲೂ ಬಾಯಿಬಿಡದಂತೆ ಹೇಳಲಾಗಿತ್ತು.  ವಾಸು ಬರ್ತ್ ಡೇಗೆ ಬಂದಿದ್ದೇವೆ ಎಂದು ಹೇಳಿಕೊಡಲಾಗಿತ್ತು. ಅದರಂತೆ ಪೊಲೀಸರು ಬಂದು ರೇಡ್ ಮಾಡಿದಾಗ ಎಲ್ಲರೂ ಇದೇ ಗಿಣಿಪಾಠ ಒಪ್ಪಿಸಿದ್ದರು.

ಇದೀಗ ಪಾರ್ಟಿಯಲ್ಲಿ ಭಾಗಿಯಾದ ಎಲ್ಲರ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಕ್ಕಿಬಿದ್ದವರ ರಕ್ತ, ಕೂದಲು ಮಾದರಿ ತೆಗೆದು ಪರೀಕ್ಷೆಗೆ ರವಾನಿಸಲಾಗಿದೆ.  ನಗರದಲ್ಲಿ ಇಂತಹ ರೇವ್ ಪಾರ್ಟಿಗಳು ಮತ್ತೆ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೀಕ್ಷೆಯಿಂದಾಗಿ ಮಕ್ಕಳ ಕಲಿಕೆಗೆ ಭಾರೀ ಪೆಟ್ಟು: ವಿಜಯೇಂದ್ರ ಆಕ್ರೋಶ

ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಾಯಿ, ಪತಿಯ ಈ ಬೆದರಿಕೆಯೇ ಕಾರಣವಾಯಿತೇ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಐಷರಾಮಿ ಕಾರಿಗೆ ಬೇಡಿಕೆಯಿಟ್ಟ ಮಗ, ಕಬ್ಬಿಣದ ಸರಳಿನಿಂದ ಹೊಡೆದ ಅಪ್ಪನ ವಿರುದ್ಧ ಬಿತ್ತು ದೊಡ್ಡ ಕೇಸ್

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments