Select Your Language

Notifications

webdunia
webdunia
webdunia
Friday, 4 April 2025
webdunia

ಅನಧಿಕೃತ ಪಟಾಕಿ ಗೋದಾಮಿನ ಮೇಲೆ ಸಿಸಿಬಿ ದಾಳಿ

ಅನಧಿಕೃತ ಪಟಾಕಿ ಗೋದಾಮ
bangalore , ಶುಕ್ರವಾರ, 3 ನವೆಂಬರ್ 2023 (15:40 IST)
ಅನಧಿಕೃತ ಪಟಾಕಿ ಗೋದಾಮಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ಗೋದಾಮು,ನ್ಯೂ ತಿಪ್ಪಸಂದ್ರ ಮುಖ್ಯ ರಸ್ತೆಯ ಧಹಿಯಾ ಎಂಬ ಮಾರ್ಟ್‌ನಲ್ಲಿರುವ ಗೋದಾಮಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
 
ಅಲ್ಲದೇ ಅಂಗಡಿ ಮಾಲೀಕ ಯಾವುದೇ ಮುಂಜಾಗ್ರತ ಕ್ರಮಗಳನ್ನ ತೆಗೆದುಕೊಳ್ಳದೆ ಪಟಾಕಿ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ  ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದು,ಒಟ್ಟು 25 ಲಕ್ಷ ಮೌಲ್ಯದ ಪಟಾಕಿ ಸೀಜ್ ಮಾಡಿದ್ದಾರೆ.ಆರೋಪಿಗಳ ವಿರುದ್ಧ ಜೀವನ್ ಭೀಮಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಗೋದಾಮಿನ ಮೇಲೆ ದಾಳಿ ನಡೆಸಿದ್ದಾರೆ.ಪರವಾನಗಿ ಪಡೆಯದೇ ಜನವಸತಿ ಪ್ರದೇಶದಲ್ಲಿ ಪಟಾಕಿ ಮಾರಾಟ ಮಾಡ್ತಿದ್ದು,ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡ್ತಿದ ಮಾಹಿತಿ ಮೇರೆಗೆ ಎರಡು ಗೋಡೌನ್ ಮೇಲೆ ಸಿಸಿಬಿ ದಾಳಿ ನಡೆಸಿದ್ದಾರೆ.ವ್ಯಕ್ತಿಯೊರ್ವನ ಬಂಧನ,15 ಲಕ್ಷ ಮೌಲ್ಯದ ಪಟಾಕಿ ಸೀಜ್ ಮಾಡಲಾಗಿದ್ದು,ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ಮತ್ತು ವಿಶೇಷ ಕಾರ್ಯಾಚರಣೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಣ ಕೊಡಿದಿದ್ರೆ ನಮ್ಮ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಹೋರಾಟ ಮಾಡ್ತೀವಿ-ಈಶ್ವರಪ್ಪ