ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳಿಬ್ಬರು ಸಿಸಿಬಿ ಬಲೆಗೆ

Webdunia
ಸೋಮವಾರ, 25 ಅಕ್ಟೋಬರ್ 2021 (21:50 IST)
ಬೆಂಗಳೂರು: ಬಿಡಿಎ ಭ್ರಷ್ಟ ಅಧಿಕಾರಿಗಳಿಬ್ಬರು 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಎಇಇ ಮಂಜುನಾಥ್, ಸರ್ವೆಯರ್ ಜಯರಾಮ್ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ ಸಿಕ್ಕಿದ್ದಿದ್ದಾರೆ.
ಆರ್.ಟಿ. ನಗರದಲ್ಲಿ ಹಳೇ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಕಾಮಗಾರಿ ನಡೆಯುತ್ತಿತ್ತು. ಸ್ಥಳಕ್ಕೆ ತೆರಳಿ ಕಾಮಗಾರಿ ಸ್ಥಗಿತಕ್ಕೆ ಬಿಡಿಎ ಎಇಇ ಸೂಚಿಸಿದ್ದರು. ಬಳಿಕ ಸರ್ವೆಯರ್ ಜಯರಾಮ್‌ ಸಂಪರ್ಕಿಸಲು ಹೇಳಿದ್ದರು.
ಸರ್ವೆಯರ್ ಜಯರಾಮ್‌ರನ್ನು ದೂರುದಾರ ಸಂಪರ್ಕಿಸಿದ್ದರು. 5 ಲಕ್ಷ ರೂಪಾಯಿ ಲಂಚ ನೀಡುವಂತೆ ಸರ್ವೆಯರ್ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಭ್ರಷ್ಟ ಅಧಿಕಾರುಗಳು ಎಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.  ಲಂಚದ ಹಣ ಜಪ್ತಿ ಮಾಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್ ಬಳಿಕವೂ ಬುದ್ಧಿ ಕಲಿಯದ ಪಾಕಿಸ್ತಾನ: ಗಡಿಯಲ್ಲಿ ಮತ್ತೆ ಡ್ರೋಣ್ ಪ್ರತ್ಯಕ್ಷ

Karnataka Weather: ಇಂದೂ ಈ ಜಿಲ್ಲೆಗಳಿಗೆ ತುಸು ಮಳೆಯ ಸೂಚನೆ

ಮನರೇಗಾ ವಿಚಾರದಲ್ಲಿ ಚರ್ಚೆಗೆ ಆಹ್ವಾನಿಸಿದ ಎಚ್‌ಡಿಕೆಗೆ ಶಿವಕುಮಾರ್ ತಿರುಗೇಟು

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕರ ವಿಚಾರ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

ಬಾಂಗ್ಲಾದೇಶ: ಶರಿಯತ್‌ಪುರ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಮುಂದಿನ ಸುದ್ದಿ
Show comments