Select Your Language

Notifications

webdunia
webdunia
webdunia
webdunia

ಜೆಡಿಎಸ್‌ಗೆ 25 ವರ್ಷಗಳ ಸಂಭ್ರಮ, ಶಾಲು ತಿರುಗಿಸಿ ದೇವೇಗೌಡರ ಸಂಭ್ರಮ

HD Devegowda

Sampriya

ಬೆಂಗಳೂರು , ಶನಿವಾರ, 22 ನವೆಂಬರ್ 2025 (17:07 IST)
Photo Credit X
ಬೆಂಗಳೂರು: ಜೆಡಿಎಸ್‌ಗೆ 25ವರ್ಷಗಳು ತುಂಬಿದ ಹಿನ್ನೆಲೆ  ಇಂದು ರಜತ ಮಹೋತ್ಸವ ಆಚರಣೆ ಮಾಡಲಾಯಿತು. ಜೆಪಿ ಭವನದಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರಿದಂರೆ ಪಕ್ಷದ ಹಾಲಿ ಮಾಜಿ ಶಾಸಕರು, ಸಂಸದರು, ಪಕ್ಷದ ನಾಯಕರು ಭಾಗಿಯಾಗಿದ್ದರು. 

ಈ ಸಂಭ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಸೇರಿದ್ದರು.

ರೈತ ಗೀತೆ ಗಾಯನ ಮೂಲಕ ಕಾರ್ಯಕ್ರಮಕ್ಕೆ ಆರಂಭಿಸಲಾಯಿತು. ಜೆಡಿಎಸ್ ಶಾಲು ತಿರುಗಿಸಿ ದೇವೇಗೌಡರು, ನಾಯಕರು
, ಕಾರ್ಯಕರ್ತರ ಸಂಭ್ರಮಾಚರಣೆ ಮಾಡಿದರು. 

ಈ ಸಂದರ್ಭದಲ್ಲಿ ಪಕ್ಷದ ಚಿಹ್ನೆಯುಳ್ಳ ಬೆಳ್ಳಿ ನಾಣ್ಯ ಬಿಡುಗಡೆ ಮಾಡಲಾಯಿತು. ಜೆಡಿಎಸ್ ಬಗ್ಗೆ ಮಾಹಿತಿ ಪಡೆಯುವ ವಾಟ್ಸಾಪ್ ಲೈನ್ 9964002028 ನಂಬರ್ ಬಿಡುಗಡೆ ಮಾಡಲಾಯಿತು. ಇನ್ನೂ ಇದೇ ಸಂದರ್ಭದಲ್ಲಿ ದೇವೇಗೌಡರ ಜೀವನ, ಸಾಧನೆ ಮತ್ತು ಕುಮಾರಸ್ವಾಮಿ ಸಾಧನೆ, ಪಕ್ಷ ನಡೆದು ಬಂದ ಹಾದಿ ಬಗ್ಗೆ ವಿಡಿಯೋ ತೋರಿಸಲಾಯಿತು. 


Share this Story:

Follow Webdunia kannada

ಮುಂದಿನ ಸುದ್ದಿ

ಐಎಸ್‌ಐ ಜತೆ ನಂಟು ಬೆಳೆಸಿ ಖತರ್ನಾಕ್ ಕೆಲಸ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್‌