ಯಾವ ನೈತಿಕತೆಯಿಂದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಿಸುತ್ತಿದ್ದಾರೆ: ಅಶೋಕ್ ಪ್ರಶ್ನೆ

Sampriya
ಗುರುವಾರ, 26 ಡಿಸೆಂಬರ್ 2024 (16:01 IST)
ಬೆಂಗಳೂರು:  ಸ್ವಾತಂತ್ರ್ಯ ದೊರಕಿತು. ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇಲ್ಲ. ಅದನ್ನು ವಿಸರ್ಜಿಸಿ ಎಂದು ಹೇಳಿದ ಮಹಾತ್ಮ ಗಾಂಧಿಯವರ ಮಾತನ್ನು ಧಿಕ್ಕರಿಸಿದ ನಕಲಿ ಗಾಂಧಿಗಳು, ಇವತ್ತು ಯಾವ ನೈತಿಕತೆಯಿಂದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಪ್ರಶ್ನೆ ಮಾಡಿದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಪೋಸ್ಟ್ ಹಾಕಿದ್ದಾರೆ. ಸ್ವಾತಂತ್ರ ಪೂರ್ವದ ಕಾಂಗ್ರೆಸ್ ಅಂದರೆ ಅದು ರಾಜಕೀಯ ಪಕ್ಷವಾಗಿರಲಿಲ್ಲ. ದೇಶವನ್ನ ದಾಸ್ಯದಿಂದ ಮುಕ್ತಿಗೊಳಿಸಲು ಹೋರಾಡುತ್ತಿದ್ದ ದೇಶಭಕ್ತರ ಒಕ್ಕೊರಲಿನ ವೇದಿಕೆಯಾಗಿತ್ತು.

ಆದರೆ ಸ್ವತಂತ್ರ ಬಂದ ನಂತರ ಮಹಾತ್ಮ ಗಾಂಧೀಜಿ ಅವರ ಮಾತನ್ನು ಧಿಕ್ಕರಿಸಿ, ಕೇವಲ ಅಧಿಕಾರಕ್ಕಾಗಿ, ಕಾಂಗ್ರೆಸ್ ಪಕ್ಷವನ್ನು ಒಂದು ಕುಟುಂಬದ ಆಸ್ತಿ ಮಾಡಿಕೊಂಡ ನಕಲಿ ಗಾಂಧಿಗಳು ಮತ್ತು ಅವರ ಅನುಯಾಯಿಗಳು ಇವತ್ತು 'ಗಾಂಧಿ ಭಾರತ' ಹೆಸರಿನಲ್ಲಿ ಐತಿಹಾಸಿಕ ಬೆಳಗಾವಿ ಅಧಿವೇಶನ ಆಚರಿಸುತ್ತಿರುವುದು ವಿಪರ್ಯಾಸ.

ಗಾಂಧೀಜಿ ಮಾತ್ರವಲ್ಲ, ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರೂ ಸಹ ಕಾಂಗ್ರೆಸ್ ಪಕ್ಷವನ್ನ ತಿರಸ್ಕಾರ ಮಾಡಿದ್ದರು. ಕಾಂಗ್ರೆಸ್ ಪಕ್ಷ ಸೇರುವುದು ಆತ್ಮಹತ್ಯೆ ಮಾಡಿಕೊಂಡಂತೆ ಎಂದು ಅಂಬೇಡ್ಕರರು ದಲಿತರಿಗೆ ಸಲಹೆ ನೀಡಿದ್ದರು.

ಸ್ವತಂತ್ಯಕ್ಕಾಗಿ ತಮ್ಮ ಸರ್ವಸ್ವವನ್ನೂ ಸಮರ್ಪಿಸಿದ  ಗಾಂಧಿ, ಸರ್ದಾರ್ ಪಟೇಲ್ ಅಂತಹ ಮೇರು ನಾಯರನ್ನು ಒಳಗೊಂಡಿದ್ದ ಸ್ವಾತಂತ್ಯ ಪೂರ್ವ ಕಾಂಗ್ರೆಸ್ ಗು ಅಧಿಕಾರಕ್ಕಾಗಿ ನಕಲಿ ಗಾಂಧಿಗಳು ನಡೆಸುತ್ತಿರುವ ಈಗಿನ ನಕಲಿ ಕಾಂಗ್ರೆಸ್ ಗು ಸಂಬಂಧವೇ ಇಲ್ಲ.

ದೇಶದ ಜನರಿಂದ ಪದೇ ಪದೇ ತಿರಸ್ಕಾರಗೊಳ್ಳುತ್ತಿರುವ ನಕಲಿ ಗಾಂಧಿಗಳನ್ನ ಮತ್ತೊಮ್ಮೆ ರೀಲಾಂಚ್ ಮಾಡಲು ರಾಜ್ಯದ 20 ಕೋಟಿ ರೂಪಾಯಿ ತೆರಿಗೆ ಹಣವನ್ನ ಪೋಲು ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್  ಸರ್ಕಾರ, ನಕಲಿ ಗಾಂಧಿಗಳ ಗುಲಾಮಗಿರಿ ಮಾಡಲು ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ದೇವಸ್ಥಾನದ ಚಿನ್ನ ಕಳವು: ಕೇರಳ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ಸಮೀಕ್ಷೆಯಿಂದಾಗಿ ಮಕ್ಕಳ ಕಲಿಕೆಗೆ ಭಾರೀ ಪೆಟ್ಟು: ವಿಜಯೇಂದ್ರ ಆಕ್ರೋಶ

ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಾಯಿ, ಪತಿಯ ಈ ಬೆದರಿಕೆಯೇ ಕಾರಣವಾಯಿತೇ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments