Select Your Language

Notifications

webdunia
webdunia
webdunia
webdunia

ಬೆಂಗಳೂರಿನ ಎಎಪಿ ಕಾರ್ಯಕರ್ತರ ಸಂಭ್ರಮ

Celebration of AAP workers in Bengaluru
bangalore , ಬುಧವಾರ, 7 ಡಿಸೆಂಬರ್ 2022 (20:19 IST)
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಗೆಲುವನ್ನು ಬೆಂಗಳೂರಿನ ಎಎಪಿ ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು. ಕುಮಾರ ಪಾರ್ಕ್ ಪಶ್ಚಿಮದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ಸಿಹಿ ಹಂಚಿ, ನಂತರ ಅಲ್ಲಿಂದ ಬಿಬಿಎಂಪಿ ಕಚೇರಿಗೆ ಬೈಕ್ ರ್ಯಾ ಲಿ ನಡೆಸುವ ಮೂಲಕ ವಿಜಯೋತ್ಸವ ಆಚರಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ, “ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ಸಾಧನೆಗಳನ್ನು ಕಣ್ಣಾರೆ ಕಂಡಿದ್ದರಿಂದ ದೆಹಲಿಯ ಜನತೆ ಎಂಸಿಡಿ ಚುನಾವಣೆಯಲ್ಲಿ ಸಹಜವಾಗಿಯೇ ಎಎಪಿಯನ್ನು ಗೆಲ್ಲಿಸಿದ್ದಾರೆ. ನಗರ ಪ್ರದೇಶದ ಜನರು ಆಮ್ ಆದ್ಮಿ ಪಾರ್ಟಿಯತ್ತ ದೊಡ್ಡ ಪ್ರಮಾಣದಲ್ಲಿ ಆಕರ್ಷಿತರಾಗುತ್ತಿರುವುದು ಎಂಸಿಡಿ ಚುನಾವಣೆಯ ಫಲಿತಾಂಶದಿಂದ ಸಾಬೀತಾಗಿದ್ದು, ಬಿಬಿಎಂಪಿ ಚುನಾವಣೆಯಲ್ಲೂ ಇದೇ ರೀತಿಯ ಫಲಿತಾಂಶ ಬರಲಿದೆ. ಬಹುಮತದೊಂದಿಗೆ ಆಮ್ ಆದ್ಮಿ ಪಾರ್ಟಿಯು ಬಿಬಿಎಂಪಿಯ ಅಧಿಕಾರದ ಗದ್ದುಗೆ ಏರಲಿದೆ. ಖಾಸಗಿ ಸಂಸ್ಥೆಗಳಿಂದ ಸಮೀಕ್ಷೆ ಮಾಡಿಸಿದ ಬಿಜೆಪಿ ನಾಯಕರಿಗೂ ಈ ವಿಚಾರ ಅರಿವಿಗೆ ಬಂದಿದೆ. ಆದ್ದರಿಂದಲೇ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ”ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅವೈಜ್ಞಾನಿಕ ಹಂಪ್ ಹಾಗೂ ಅನಾವಶ್ಯಕ ಹಂಪ್ ರಿಮೂವ್ ಮಾಡಲು ಸೂಚನೆ...!