Webdunia - Bharat's app for daily news and videos

Install App

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರದ ಮೇಲೆ ಆರೋಪ

geetha
ಸೋಮವಾರ, 5 ಫೆಬ್ರವರಿ 2024 (18:00 IST)
ಬೆಂಗಳೂರು : ಆಡಳಿತ ವಿರೋಧಿ ಅಲೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿರುವ ಬಿಜೆಪಿ, 2004-2014ರ ವರೆಗೆ ಯುಪಿಎ ಅಧಿಕಾರದಲ್ಲಿದ್ದಾಗ ಕಲ್ಲಿದ್ದಲು ಹಗರಣ, 2ಜಿ ಹಗರಣ, ಕಾಮನ್‌ವೆಲ್ತ್‌ ಹಗರಣಗಳಂಥ ಭಾನಗಡಿಗಳ ನಡುವೆ ಕರ್ನಾಟಕಕ್ಕೆ ನೀಡಲು ಅಂದಿನ ಕೇಂದ್ರ ಸರ್ಕಾರದ ಬಳಿ ಇದ್ದದ್ದೇ ₹81,795 ಕೋಟಿ. ಇದಕ್ಕೆ ಹೋಲಿಸಿದರೆ ಮೋದಿ ಸರ್ಕಾರ ನೀಡಿರುವ  ₹2,82,791 ಕೋಟಿ ಶೇ.245 ರಷ್ಟು ಹೆಚ್ಚು ಎಂಬುದನ್ನು ಕಾಂಗ್ರೆಸ್‌ ಯಾವತ್ತೂ ಮರೆಮಾಚಲು ಸಾಧ್ಯವಿಲ್ಲ. ಕರ್ನಾಟಕದ ಅಭಿವೃದ್ಧಿಗೆ ಈಗ ಹಿಂದೆಂದಿಗಿಂತಲೂ ಹೆಚ್ಚು ಸಿಕ್ಕಿದೆ ಎಂಬುದನ್ನು ತಿರುಚಲು ನೀವು ಎಷ್ಟೇ ಪ್ರಯತ್ನಿಸಿದರೂ ಅಸಾಧ್ಯ ಎಂದು ಹೇಳಿದೆ.

 
ಜೊತೆಗೆ, ನಮ್ಮ ರಾಜ್ಯದಲ್ಲಿ ನಿಮ್ಮ ಪಕ್ಷದವರು 1947 ರಿಂದ 2014ರ ವರೆಗೆ ನಿರ್ಮಾಣ ಮಾಡಿದ ರಸ್ತೆ ಕೇವಲ 6750 ಕಿಲೋಮೀಟರ್. ಮೋದಿ ಸರ್ಕಾರ 2014ರ ನಂತರ ಕರ್ನಾಟಕದಲ್ಲಿ ಮಾಡಿದ ರಸ್ತೆ ನಿರ್ಮಾಣ ಒಟ್ಟು 13,500 ಕಿಲೋಮೀಟರ್. ಸಿದ್ದರಾಮಯ್ಯನವರೇ, ಮೊದಲು ನಾಲ್ಕು ಗಂಟೆಗೂ ಹೆಚ್ಚು ಸಮಯ ತಗಲುತ್ತಿದ್ದ ನಿಮ್ಮ ತವರೂರಿಗೆ ಕೇವಲ ಒಂದೂವರೆ ಗಂಟೆಯಲ್ಲೇ ನೀವಿಂದು ಹೋಗುತ್ತಿರುವ ಆ ರಸ್ತೆಯನ್ನು ಮಾಡಿಸಿದ್ದೂ ಸಹ ಮೋದಿ ಸರ್ಕಾರವ ಎಂದು ಬಿಜೆಪಿ ಲೇವಡಿ ಮಾಡಿದೆ.

ಬಜೆಟ್‌ ನಲ್ಲಿ ರಾಜ್ಯಕ್ಕೆ ನೀಡಿರುವ ಅನುದಾನದ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ವಾಕ್ಸಮರ ಮುಂದುವರೆದಿದೆ. ಸೋಮವಾರ ಅಧಿಕೃತ ಎಕ್ಸ್‌ ಖಾತೆಯ ಮೂಲಕ ಸಂದೇಶ ಹಂಚಿಕೊಂಡಿರುವ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಡಳಿತದ ದಯನೀಯ ವೈಫಲ್ಯ ಮರೆಮಾಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ದೂರಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments