Publish Date: Thu, 15 Jun 2023 (19:27 IST)
Updated Date: Thu, 15 Jun 2023 (18:38 IST)
ರಾಜ್ಯ ಸರ್ಕಾರಕ್ಕೆ ಅನ್ನಭಾಗ್ಯ ಅಕ್ಕಿ ನೀಡಲು FCI ತಿರಸ್ಕರಿಸಿದ ವಿಚಾರವಾಗಿ ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರ ಮಾತಿಗೆ ನನ್ನ ಸಂಪೂರ್ಣ ಸಹಮತವಿದೆ. ಬಡವರಿಗೆ ಸಹಾಯ ಮಾಡುವ ವಿಚಾರಕ್ಕೆ ಕೇಂದ್ರ ಸರ್ಕಾರ ಸಹಕಾರ ನೀಡಬೇಕು. ಅವರ ಈ ಧೋರಣೆ ಅವರು ಯಾರ ಪರ ಇದ್ದಾರೆ ಎಂದು ತೋರಿಸುತ್ತೆ. ನಾವು ಪುಕ್ಕಟ್ಟೆ ಕೊಡಿ ಎಂದು ಕೇಳಿಲ್ಲ, ಹಣ ಕೊಡ್ತೀವಿ. ಅದಕ್ಕೆ ಅವರು ಅಕ್ಕಿ ನೀಡಬಹುದಿತ್ತು ಎಂದರು.