ಕಲಬುರಗಿ : ಕೇಂದ್ರ ಸರ್ಕಾರ ರಾಜ್ಯದ ವಿರುದ್ಧ ದ್ವೇಷದ ರಾಜಕಾರಣ ಪ್ರಾರಂಭಿಸಿದ್ದು, ಅನ್ನಭಾಗ್ಯ ಯೋಜನೆ ಜಾರಿಗೊಳಿಸದಂತೆ ಷಡ್ಯಂತ್ರ ರೂಪಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಕಲಬುರಗಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡಿಗರ ಅಸ್ಮಿತೆಗೆ ಧಕ್ಕೆಯಾಗುತ್ತಿರುವುದಕ್ಕೆ, ನಿರುದ್ಯೋಗ ಸಮಸ್ಯೆ ಹೆಚ್ಚಿರುವುದಕ್ಕೆ ರಾಜ್ಯದ ಕನ್ನಡಗರು ಬಿಜೆಪಿ ವಿರುದ್ಧ ಸಿಡಿದೆದ್ದಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿರುವುದಕ್ಕೆ ಸಹಿಸಿಕೊಳ್ಳಲು ಆಗದೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ವಿರುದ್ಧ ದ್ವೇಷದ ರಾಜಕಾರಣ ಪ್ರಾರಂಭಿಸಿದೆ ಎಂದರು.