ಕೇಂದ್ರ ಸರ್ಕಾರ ಒಲ್ಲದ ಮನಸ್ಸಿನಿಂದ ಬರ ಪರಿಹಾರ ನೀಡಿದೆ: ಸಿಎಂ ಸಿದ್ದರಾಮಯ್ಯ

Sampriya
ಶನಿವಾರ, 27 ಏಪ್ರಿಲ್ 2024 (18:41 IST)
ಬೆಂಗಳೂರು: ಕರ್ನಾಟಕಕ್ಕೆ ಬರ ಪರಿಹಾರವಾಗಿ ಕೇಂದ್ರ ಸರ್ಕಾರ ₹3,454 ಕೋಟಿ  ಪರಿಹಾರ ನೀಡಿದೆ.  ಸರ್ಕಾರ ಸುಪ್ರೀಂ ಕೋರ್ಟ್ ಗೆ ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಕೇಂದ್ರ ಸರ್ಕಾರ ಈ ಪರಿಹಾರ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರಸ್ಥಿತಿಯನ್ನು ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರವು ರಾಜಕೀಯ ದುರುದ್ದೇಶದಿಂದ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ.

ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು @narendramodi
 ಸರ್ಕಾರ ಸುಪ್ರೀಂ ಕೋರ್ಟ್ ಗೆ ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ ಎಂದಿದ್ದಾರೆ.

ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಆದ್ರೆ, ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ವಿಳಂಬ ಮಾಡಿತ್ತು. ಇದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಈ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ  ಕೇಂದ್ರ ಸರ್ಕಾರ ಹಣ ಬಿಡುಗಡೆಯ ಬಗ್ಗೆ ಭರವಸೆ ನೀಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments