Select Your Language

Notifications

webdunia
webdunia
webdunia
webdunia

ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಬೇಕು– ಖಾದರ್

ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಬೇಕು– ಖಾದರ್
ಬೆಂಗಳೂರು , ಗುರುವಾರ, 4 ಜನವರಿ 2018 (15:31 IST)
ಕೊಲೆ, ಹಲ್ಲೆ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪಾಪೂಲರ್ ಫ್ರೆಂಟ್ ಆಫ್ ಇಂಡಿಯಾ (ಪಿಎಫ್‍ಐ) ಮತ್ತು ಸೋಸಿಯಲ್ ಡೆಮಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಸಂಘಟನಗಳು ರಾಷ್ಟ್ರಮಟ್ಟದಲ್ಲಿ ಕಾರ್ಯಾಚರಣೆ ಮಾಡುತ್ತಿದ್ದು, ಅವುಗಳನ್ನು ಕೇಂದ್ರ ಸರ್ಕಾರ ನಿಷೇಧಿಸಬೇಕೆ ಹೊರತು ರಾಜ್ಯ ಸರ್ಕಾರವಲ್ಲ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
 
ಕರಾವಳಿ ಸ್ಥಿತಿ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಸಮಾಲೋಚನೆ ನಡೆಸಿದ ಬಳಿಕೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸಂಘಟನೆಗಳನ್ನು ನಿಷೇಧಿಸಲು ಕಾಂಗ್ರೆಸನಿಂದ ಯಾವುದೇ ವಿರೋಧವಿಲ್ಲ. ಒಂದು ವೇಳೆ ರಾಜ್ಯ ಸರ್ಕಾರ ನಿಷೇಧ ಮಾಡಿದರೆ ಆ ಸಂಘಟನೆಗಳು ಕೇರಳ ರಾಜ್ಯದ ಕಾಸರಗೋಡು, ಗೋವಾ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಕುಳಿತು ತಮ್ಮ ಚಟುವಟಿಕೆಗಳನ್ನು ಮುಂದುವರೆಸುತ್ತವೆ. ಆದ್ದರಿಂದ ಕೇಂದ್ರ ಸರ್ಕಾರವೇ ನಿಷೇಧ ಮಾಡುವುದು ಸೂಕ್ತ ಎಂದಿದ್ದಾರೆ.
 
ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ, ಸಂಸದೆ ಶೋಭಾ ಕರಂದ್ಲಾಜೆ ಸಂಸತ್‍ನಲ್ಲಿ ಈವರೆಗೂ ಈ ಸಂಘಟನೆ ಬಗ್ಗೆ ಮಾತನಾಡದಿರುವುದು ಏಕೆ ಪ್ರಶ್ನಿಸಿದ ಅವರು, ಇವರು ಸಂಘಟನೆಗಳ ನಿಷೇಧಕ್ಕೆ ಕನಿಷ್ಠ ಪಕ್ಷ ಕೇಂದ್ರ ಗೃಹ ಸಚಿವರಿಗೆ ಮನವಿ ಪತ್ರವಾದರೂ ನೀಡಿದ್ದಾರಾ ಎಂದುದನ್ನು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದ್ದಾರೆ.
 
ದೀಪಕ್‍ರಾವ್ ತುಂಬಾ ಒಳ್ಳೆಯ ಹುಡುಗ. ಬಡ ಕುಟುಂಬದಿಂದ ಬಂದು ಕಷ್ಟಪಟ್ಟು ಕೆಲಸ ಮಾಡಿ ಜೀವನ ಮಾಡುತ್ತಿದ್ದ. ನಾವೆಲ್ಲ ಆತನ ಕುಟುಂಬದ ನೋವಿನಲ್ಲಿ ಭಾಗಿಯಾಗಬೇಕಿದೆ. ರಾಜಕೀಯ ಹೊರತುಪಡಿಸಿ ಕೊಲೆಯಾದ ಸಹೋದರನ ಅಂತ್ಯಸಂಸ್ಕಾರವನ್ನು ಗೌರವಯುತವಾಗಿ ಮಾಡಬೇಕಿದೆ. ಆದರೆ, ಬಿಜೆಪಿಯವರು ಸಾವಿನಲ್ಲೂ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪಿಎಫ್‍ಐ, ಎಸ್‍ಡಿಪಿಐ ನಿಷೇಧಿಸಲು ಶೋಭಾ ಕರಂದ್ಲಾಜೆ ಒತ್ತಾಯ