Publish Date: Thu, 21 Sep 2017 (16:37 IST)
Updated Date: Thu, 21 Sep 2017 (16:39 IST)
ರಾಜ್ಯ ಸರಕಾರದ ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಕೇಂದ್ರ ಸಚಿವರೊಬ್ಬರು ಪ್ರಧಾನಿ ಮೋದಿಯನ್ನು ಹೊಗಳಿದ ಘಟನೆ ವರದಿಯಾಗಿದೆ.
ಉಕ್ಕು ತಯಾರಿಕೆ ಕಂಪೆನಿಯಾದ ಜಿಂದಾಲ್‌ನಲ್ಲಿ ಆಯೋಜಿಸಲಾಗಿದ್ದ ಸರಕಾರಿ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಜಯಂತ್ ಸಿನ್ಹ, ಪ್ರಧಾನಿ ಮೋದಿ ದೇಶವನ್ನು ಅಭಿವೃದ್ಧಿಯತ್ತ ಸಾಗಿಸುತ್ತಿದ್ದಾರೆ. ಬಿಜೆಪಿಯ ಬಗ್ಗೆ ಜನತೆಗೆ ಹೆಚ್ಚನ ಒಲವಿದೆ, ಮುಂಬರುವ ಚುನಾವಣೆಯಲ್ಲಿ ಜನತೆ ಬಿಜೆಪಿ ಪರ ಮತ ಚಲಾಯಿಸುವ ವಿಶ್ವಾಸವಿದೆ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.
ರಾಜ್ಯ ಸರಕಾರದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯನ್ನು ಹೊಗಳಿ ಚುನಾವಣೆ ವಿಷಯವನ್ನು ಪ್ರಸ್ತಾಪಿಸಿರುವುದು ಸರಿಯಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಬಿಜೆಪಿ ಕೇಳುತ್ತಿದೆ. ಕಾಂಗ್ರೆಸ್ ಸರಕಾರ ಅವಧಿಯಲ್ಲಿ ಸಾವಿರಾರು ಡ್ಯಾಂಗಳನ್ನು ನಿರ್ಮಿಸಲಾಗಿದೆ. ಸಾವಿರಾರು ಕಾರ್ಯಗಳನ್ನು ಮಾಡಿದೆ. ಆಧಾರ ಕಾರ್ಡ್, ಜಿಎಸ್‌ಟಿ, ಮಹಿಳಾ ಮೀಸಲಾತಿ, ಜನಧನ ಯೋಜನೆ ಪ್ರತಿಯೊಂದು ಕಾಂಗ್ರೆಸ್ ಜಾರಿಗೊಳಿಸಿದೆ. ಕಳೆದ ಮೂರು ವರ್ಷಗಳಲ್ಲಿ ಬಿಜೆಪಿ ಏನು ಸಾಧನೆ ಮಾಡಿದೆ ಎಂದು ಸಚಿವ ಸಂತೋಷ್ ಲಾಡ್ ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.