ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅಹೋರಾತ್ರಿ ನಿರಶನ ಕೈಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮಣಿದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 4 ರಂದು ಸುಪ್ರೀಕೋರ್ಟ್ ನೀಡಿರುವ ತೀರ್ಪು ಆಶಾದಾಯಕವಾಗಿದೆ ಎಂದು ಹೇಳಿದರು.
ಕಾವೇರಿ ಜಲಾನಯನ ಪ್ರದೇಶದ ವಸ್ತುಸ್ಥಿತಿ ಅಧ್ಯಯನ ಮಾಡಲು ಕೇಂದ್ರದಿಂದ ತಂತ್ರಿಕರ ತಂಡ ಆಗಮಿಸಿದೆ. ಅಧ್ಯಯನದ ಬಳಿಕೆ ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಕೆ ಮಾಡಲಿದ್ದು, ರಾಜ್ಯದ ನೈಜ ಸ್ಥಿತಿ ಮನವರಿಕೆ ಮಾಡಿಕೊಡಲ್ಲಿದ್ದಾರೆ ಎಂದರು.
ಪುತ್ರ ನಿಖಿಲ್ ಗೌಡ ಅಭಿನಯದ ಜಾಗ್ವಾರ್ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ನಿಖಿಲ್ ಗೌಡ ರಾಜಕೀಯ ಬರುವ ಪ್ರಶ್ನೆಯೇ ಇಲ್ಲ. ಆತ ಚಿತ್ರರಂಗದಲ್ಲೇ ಮುಂದುವರೆಯಲಿದ್ದಾನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ