ಏರೋ ಇಂಡಿಯಾ ಶಿಫ್ಟ್ ಆಗಲ್ಲ: ಕೇಂದ್ರದ ಸ್ಪಷ್ಟನೆ

ಶನಿವಾರ, 8 ಸೆಪ್ಟಂಬರ್ 2018 (14:39 IST)
ನವದೆಹಲಿ: ಈ ಬಾರಿಯೂ ಪ್ರತೀ ವರ್ಷದಂತೆ ಬೆಂಗಳೂರಿನಲ್ಲಿಯೇ ಏರ್ ಶೋ ನಡೆಯಲಿದೆ ಎಂದು ಕೇಂದ್ರ ಸ್ಪಷ್ಟನೆ ನೀಡಿದೆ.

ಈ ವರ್ಷ ಏರ್ ಶೋವನ್ನು ಉತ್ತರ ಪ್ರದೇಶಕ್ಕೆ ಸ್ಥಳಾಂತರಿಸಲು ಕೇಂದ್ರ ತಯಾರಿ ನಡೆಸಿದೆ ಎಂದು ವರದಿಯಾಗಿತ್ತು. ಇದಕ್ಕೆ ಜೆಡಿಎಸ್ ಮತ್ತು ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಇದರ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಕೂಡಾ ಏರ್ ಶೋ ಸ್ಥಳಾಂತರಿಸದಂತೆ ಕೇಂದ್ರಕ್ಕೆ ಪತ್ರ ಬರೆದಿದ್ದರು. ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಏರ್ ಶೋ ಹಸ್ತಾಂರಿಸುವ ಪ್ರಶ್ನೆಯೇ ಇಲ್ಲ. ಪ್ರತಿ ವರ್ಷದಂತೆ ಬೆಂಗಳೂರಿನ ವಾಯುನೆಲೆಯಲ್ಲೇ ಏರ್ ಶೋ ನಡೆಯಲಿದೆ ಎಂದು ಕೇಂದ್ರ ಸ್ಪಷ್ಟವಾಗಿ ತಿಳಿಸಿದೆ. ಈ ಮೂಲಕ ಇದರ ಬಗ್ಗೆ ಎದ್ದಿದ್ದ ವದಂತಿಗಳಿಗೆ ತೆರೆ ಬಿದ್ದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಫ್ರೀಜರ್ ನಲ್ಲಿಟ್ಟ ಪಾಪಿ ಚಿಕ್ಕಪ್ಪ!