Select Your Language

Notifications

webdunia
webdunia
webdunia
webdunia

ಸಿಇಟಿ ಪರೀಕ್ಷೆಗೆ ಮುಹೂರ್ತ ನಿಗದಿ

ಸಿಇಟಿ ಪರೀಕ್ಷೆಗೆ ಮುಹೂರ್ತ ನಿಗದಿ
ಬೆಂಗಳೂರು , ಬುಧವಾರ, 9 ಜೂನ್ 2021 (08:42 IST)
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿರುವ ರಾಜ್ಯ ಸರ್ಕಾರ ಈಗ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಮುಹೂರ್ತ ನಿಗದಿ ಮಾಡಿದೆ.


ಆಗಸ್ಟ್ 28,29 ಮತ್ತು 30 ರಂದು ಸಿಇಟಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪಾಸಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಿಇಟಿ ಬರೆಯಲು ಅವಕಾಶ ನೀಡಲಾಗಿದೆ.

ಐಚ್ಛಿಕ ವಿಷಯಗಳ ಪರೀಕ್ಷೆ 28 ಮತ್ತು 29 ರಂದು ಆಗಸ್ಟ್ 30 ರಂದು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಪ್ರವೇಶ ನಡೆಯಲಿದೆ. ಪರೀಕ್ಷೆ ಪದ್ಧತಿಯಲ್ಲಿ ಬದಲಾವಣೆಯಿಲ್ಲ. 60 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಮೊದಲ ದಿನ ಗಣಿತ, ನಂತರದ ದಿನ ಭೌತಶಾಸ್ತ್ರ ಮತ್ತು ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿದೆ. ಜೂನ್ 15 ರಿಂದ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಇನ್ನು, ಈ ಬಾರಿ ಸಿಇಟಿ ಪರೀಕ್ಷೆಗೆ ಪಿಯು ಅಂಕ ಪರಿಗಣಿಸಲ್ಲ ಎಂದು ಸರ್ಕಾರ ಮಹತ್ವದ ತೀರ್ಮಾನ ಪ್ರಕಟಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಸಿಎಂ ಉದಾಸಿ ಅಂತ್ಯಕ್ರಿಯೆ ಇಂದು