Daily Horoscope
✕

CET ಪರೀಕ್ಷೆ ದಿನಾಂಕ ಘೋಷಣೆ, ಯಾವಾಗ ಅರ್ಜಿ ಸಲ್ಲಿಸಬೇಕು ಇಲ್ಲಿದೆ ಸಂಪೂರ್ಣ ವಿವರ

Krishnaveni K
ಶನಿವಾರ, 3 ಜನವರಿ 2026 (10:15 IST)
ಬೆಂಗಳೂರು: ಎಂಜಿನಿಯರಿಂಗ್ ಪದವಿ ಸೇರಿದಂತೆ ವೃತ್ತಿಪರ ಕೋರ್ಸ್ ಗಳಿಗೆ ನಡೆಯುವ ಸಿಇಟಿ ಪ್ರವೇಶ ಪರಿಕ್ಷೆ ದಿನಾಂಕ ಘೋಷಣೆ ಮಾಡಲಾಗಿದೆ. ಪರೀಕ್ಷೆ ಯಾವಾಗ ನಡೆಯಲಿದೆ ಸಂಪೂರ್ಣ ವಿವರ ಇಲ್ಲಿದೆ.

ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ಮಾಡಲಾಗುವ ಸಿಇಟಿ ಪರೀಕ್ಷೆ ದಿನಾಂಕವನ್ನು ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಪ್ರಕಟಿಸಿದ್ದಾರೆ. ಏಪ್ರಿಲ್ 23 ಮತ್ತು 24 ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ ಎಂದು ಸಚಿವರು ಘೋಷಿಸಿದ್ದಾರೆ.

ಜನವರಿ 17 ರಿಂದ ಆನ್ ಲೈನ್ ನಲ್ಲಿ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು ಎಂದು ಸಚಿವರು ಹೇಳಿದ್ದಾರೆ. ಈ ಬಾರಿ ಕಾಲೇಜು ಹಂತದಲ್ಲೇ ಅರ್ಜಿ ಭರ್ತಿ ಮಾಡಲು ಅವಕಾಶ ನೀಡಲಾಗುತ್ತದೆ.  ಇದಕ್ಕಾಗಿ ಆಯ್ದ ಪಿಯು ವಿಜ್ಞಾನ ಕಾಲೇಜುಗಳ ಪ್ರಾಧ್ಯಾಪಕರಿಗೆ ತರಬೇತಿ ನೀಡಲಾಗುತ್ತದೆ. ಅವರು ತಮ್ಮ ಕಾಲೇಜಿನ ಇತರೆ ಸಿಬ್ಬಂದಿಗಳಿಗೆ ತರಬೇತಿ ನೀಡಿ ವಿದ್ಯಾರ್ಥಿಗಳ ಅರ್ಜಿ ಭರ್ತಿಯ ಮೇಲ್ವಿಚಾರಣೆ ನಡೆಸಲಿದ್ದಾರೆ.

 ಈ ಬಾರಿ ಇದೇ ಮೊದಲ ಬಾರಿಗೆ ಆಧಾರ್ ಪ್ರಮಾಣೀಕರಣ ವ್ಯವಸ್ಥೆ ಜಾರಿಗೆ ತರಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಹೆಸರು, ಹುಟ್ಟಿದ ದಿನಾಂಕ, ವಿಳಾಸ ವಿವರಗಳನ್ನು ಆಧಾರ್ ಅಥವಾ ಡಿಜಿಲಾಕರ್ ಮೂಲಕ ಪ್ರಮಾಣೀಕರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರಿಂದ ಹೆಸರಿನಲ್ಲಿ ಆಗುತ್ತಿದ್ದ ದೋಷಗಳನ್ನು ತಪ್ಪಿಸಬಹುದಾಗಿದೆ.

ಈ ಬಾರಿ ಏಪ್ರಿಲ್ 23 ರಂದು ಬೆಳಿಗ್ಗೆ 10.30 ರಿಂದ ಭೌತ ಶಾಸ್ತ್ರ, ಮಧ್ಯಾಹ್ನ 2.30 ರಿಂದ ರಸಾಯನ ಶಾಸ್ತ್ರ, ಏಪ್ರಿಲ್ 24 ರಂದು ಬೆಳಿಗ್ಗೆ 10.30 ರಿಂದ ಗಣಿತ, ಮಧ್ಯಾಹ್ನ 2.30 ರಿಂದ ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಏಪ್ರಿಲ್ 22 ರಂದು ಗಡಿನಾಡು, ಹೊರನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಡ್ಜ್ ಏನೋ ಹೊರಗೆ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದರೆ ಎರಡು ಕುಟುಂಬದವರು ರಸ್ತೆಯಲ್ಲಿ ಹೀಗಾಡೋದಾ Video

ಭಾರತದಲ್ಲಿ ಜೆನ್ ಜಿ ಹೋರಾಟಕ್ಕೆ ನಮಗೆ ಬಾಂಗ್ಲಾದೇಶವೇ ಸ್ಪೂರ್ತಿ, ಅವರಿಗೆ ಥ್ಯಾಂಕ್ಸ್ ಎಂದ ನೇಹಾ ಬೋರಾ

ಪ್ರೀತಿಸಿ ಮದುವೆಗೆ ಕೈ ಕೊಟ್ಳು… ರಸ್ತೆಯಲ್ಲೇ ಜುಟ್ಟು ಹಿಡಿದು ಕಿತ್ತಾಡಿದ ಯುವ ಜೋಡಿ: ಕೊನೆಗೆ ಏನಾಯ್ತು ನೋಡಿ Video

ಎರಡು ಕಡೆ ವೋಟ್ ಇದೆ, ಒಂದು ಕಡೆ ಡಿಲೀಟ್ ಮಾಡಿದ್ದಾರೆ, ಅದಕ್ಕೇ ಪ್ರತಿಭಟನೆಗೆ ಬಂದೆ: ಈ ವ್ಯಕ್ತಿಯ ಮಾತಿಗೆ ಏನನ್ನಬೇಕು Video

ಮುಂದಿನ ಸುದ್ದಿ
Show comments