Select Your Language

Notifications

webdunia
webdunia
webdunia
webdunia

ಜೂ.16ರಿಂದ 18ರವರೆಗೆ ಸಿಇಟಿ ಪರೀಕ್ಷೆ

ಜೂ.16ರಿಂದ 18ರವರೆಗೆ  ಸಿಇಟಿ ಪರೀಕ್ಷೆ
ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಜೂ.16ರಿಂದ 18ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ 2022ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಒಟ್ಟಾರೆ 2,16,525 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸೇರಿ ಒಟ್ಟು 486 ಕೇಂದ್ರಗಳಲ್ಲಿ ಈ ಬಾರಿ ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವವರ ಪೈಕಿ ಈ ಬಾರಿ 1,04,550 ಗಂಡುಮಕ್ಕಳು ಹಾಗೂ 1,11,975 ಹೆಣ್ಣು ಮಕ್ಕಳಿದ್ದಾರೆ ಎಂದು ಕೆಇಎ ಅಧಿಕಾರಿಗಳು ತಿಳಿಸಿದ್ದಾರೆ. 16 ರಂದು ಜೀವಶಾಸ್ತ್ರ, ಗಣಿತ, 17ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ, 18ರಂದು ಹೊರನಾಡು, ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಹಲವೆಡೆ ಇನ್ನೆರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ