ಬೆಂಗಳೂರು (ಆ. 27): ರಾಜ್ಯದಲ್ಲಿ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಒಟ್ಟು 530 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲು ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.