Publish Date: Thu, 25 Aug 2022 (13:40 IST)
Updated Date: Thu, 25 Aug 2022 (16:56 IST)
ಬೆಂಗಳೂರು : 21 ಟ್ರಸ್ಟ್, ಪ್ರತಿಷ್ಠಾನಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕಾತಿ ಸಂಬಂಧ ಹೊರಡಿಸಿದ ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ.
ಕೆಲವರಿಂದ ಪ್ರತಿಷ್ಠಾನಗಳ ಅಧ್ಯಕ್ಷ ಸ್ಥಾನ ನಿರಾಕರಣೆ, ನೇಮಕಾತಿಯಲ್ಲಿ ಕೆಲವು ಎಡವಟ್ಟುಗಳು ನಡೆದ ಹಿನ್ನೆಲೆಯಲ್ಲಿ ಆದೇಶವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಾಪಸ್ ಪಡೆದಿದೆ.
ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರನ್ನಾಗಿ ತೇಜಸ್ವಿ ಪತ್ನಿ ರಾಜೇಶ್ವರಿ ಅವರನ್ನು ನೇಮಕ ಮಾಡಲಾಗಿತ್ತು. ರಾಜೇಶ್ವರಿ ಅವರು ಕಳೆದ ಡಿಸೆಂಬರ್ನಲ್ಲಿ ನಿಧನರಾಗಿದರು.