Select Your Language

Notifications

webdunia
webdunia
webdunia
webdunia

ಸಿಸಿಬಿ ಕಚೇರಿಯಲ್ಲಿ ಚೈತ್ರಾ ಎನ್‌ಕ್ವೈರಿ

Chaitra inquiry
bangalore , ಗುರುವಾರ, 14 ಸೆಪ್ಟಂಬರ್ 2023 (14:46 IST)
ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಅವರ ವಿಚಾರಣೆ ಆರಂಭವಾಗಿದೆ. ನಿನ್ನೆ ಬಂಧನಕ್ಕೊಳಗಾದ ಚೈತ್ರಾಳನ್ನ ರಾತ್ರಿ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಸದ್ಯ 10 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ಸಿಸಿಬಿ ಕಚೇರಿಗೆ ಕರೆತಂದಿದ್ದು, ವಿಚಾರಣೆ ನಡೆಸಲಿದ್ದಾರೆ. CCB, ACP ರೀನಾ ಸುವರ್ಣ ಅವರಿಂದ ವಿಚಾರಣೆ ನಡೆಯಲಿದೆ.. ಬಳಿಕ ಹಣ ಪಡೆದ ಸ್ಥಳಗಳಲ್ಲಿ ಮಹಜರು ಮಾಡಲಿದ್ದಾರೆ. ಚೈತ್ರಾ ಕುಂದಾಪುರ ಉದ್ಯಮಿ ಗೋವಿಂದ ಬಾಬು ಪೂಜಾರಿ ಮಾದರಿಯಲ್ಲೆ ಹಲವರಿಗೆ ವಂಚನೆ ಮಾಡಿರುವ ಸಾಧ್ಯತೆ ಹಿನ್ನೆಲೆ ಎಲ್ಲಾ ಆಯಾಮದಲ್ಲಿಯೂ ಬಂಧಿತ ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್​ ಅವರನ್ನು ವಿಚಾರಣೆ ನಡೆಸಲಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇವಸ್ಥಾನಗಳ ಬಳಿ ತಂಬಾಕು ಉತ್ಪನ್ನ ಮಾರಾಟ ನಿಷೇಧ