Publish Date: Tue, 05 Dec 2023 (20:08 IST)
Updated Date: Tue, 05 Dec 2023 (21:11 IST)
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉಡುಪಿಯ ಬೈಂದೂರಿನ ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ಹಣವನ್ನು ಪಡೆದು ವಂಚನೆ ಮಾಡಿದ ಆರೋಪದಲ್ಲಿ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಹಾಗೂ ಆಕೆಯ ಸಹಚರ ಶ್ರೀಕಾಂತ್‌ಗೆ ಸೋಮವಾರ ಜಾಮೂನು ಸಿಕ್ಕಿದೆ. ಮಂಗಳವಾರ ಬೆಳಗ್ಗೆ ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆಯಿದೆ ಅಂತಾ ಮೂಲಗಳು ತಿಳಿಸಿವೆ.