Select Your Language

Notifications

webdunia
webdunia
webdunia
webdunia

ಪ್ರಚೋದನಕಾರಿ ಹೇಳಿಕೆ ನೀಡಿದ ಚಕ್ರವತ್ರಿ ಸೂಲಿಬೆಲೆಗೆ ಸಂಕಷ್ಟ

Chakravarti Sulibele

Sampriya

ಮಂಗಳೂರು , ಸೋಮವಾರ, 17 ಮಾರ್ಚ್ 2025 (16:43 IST)
Photo Courtesy X
ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿ, ಕೋಮುದ್ವೇಷಕ್ಕೆ ಕಾರಣವಾಗಿದ್ದ ಬ್ರಿಗೇಡ್‌ನ ಸಂಸ್ಥಾಪಕ, ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ  ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮಾರ್ಚ್ 9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ ಎಂದು ಹೇಳಿದ್ದರು.

ಪ್ರಚೋದನಕಾರಿ ಭಾಷಣ ಮಾಡಿ,‌ ಕೋಮು ದ್ವೇಷಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಶೀದ್ ಉಳ್ಳಾಲ ಅವರು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಠಾಣೆಗೆ ದೂರು ನೀಡಿದ್ದರು. ದೂರಿನ‌ ಹಿನ್ನೆಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸೂಲಿಬೆಲೆ ಭಾಷಣದಲ್ಲಿ ಹೇಳಿದ್ದೇನು: ಇದುವರೆಗೆ ಮತಾಂತರ ಎಂದು ಬಡಿದಾಡಿದ್ದು ಸಾಕು. ಈಗ ಹಿಂದೂ ಧರ್ಮಕ್ಕೆ ಘರ್ ವಾಪ್ಸಿ ಮಾಡೋ ಬಗ್ಗೆ ಮಾತಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು? ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ ಅಂತ ನಮ್ಮ ಗಂಡು ಮಕ್ಕಳಿಗೆ ಕೇಳೋಣ. ಬೇರೆ ಧರ್ಮದ ಹುಡುಗಿಯರನ್ನೂ ನೋಡು ಅಂತ ಹೇಳಬೇಕು. ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ಕರೆ ನೀಡಿದ್ದರು.

ಈಗ ಟ್ವೆಂಟಿ ಟ್ವೆಂಟಿ ಮ್ಯಾಚ್ ಆಡೋ ಸಮಯ ಬಂದಾಗಿದೆ. ಇರುವ ಇಪ್ಪತ್ತು ಓವರ್‌ನಲ್ಲಿ ಬಡಿಬೇಕು ಅಷ್ಟೇ. ಘರ್ ವಾಪ್ಸಿ ಹೇಗೆ ಮಾಡೋದು ಅನ್ನೋದರ ಬಗ್ಗೆ ರೀಲ್ಸ್ ಮಾಡಿ. ಹಿಂದೂ ಧರ್ಮದಿಂದ ಹೋಗಿರುವವರನ್ನ ಮೊದಲು ವಾಪಸ್ ತರೋಣ ಎಂದು ಕರೆ ನೀಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

Arecanut Price today: ಇಂದು ಅಡಿಕೆ, ಕಾಳುಮೆಣಸು ದರದಲ್ಲಿ ವ್ಯತ್ಯಾಸವಾಗಿದೆಯೇ ಇಲ್ಲಿದೆ ವಿವರ