ಪ್ರಚೋದನಕಾರಿ ಹೇಳಿಕೆ ನೀಡಿದ ಚಕ್ರವತ್ರಿ ಸೂಲಿಬೆಲೆಗೆ ಸಂಕಷ್ಟ

Sampriya
ಸೋಮವಾರ, 17 ಮಾರ್ಚ್ 2025 (16:43 IST)
Photo Courtesy X
ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿ, ಕೋಮುದ್ವೇಷಕ್ಕೆ ಕಾರಣವಾಗಿದ್ದ ಬ್ರಿಗೇಡ್‌ನ ಸಂಸ್ಥಾಪಕ, ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ  ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮಾರ್ಚ್ 9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ ಎಂದು ಹೇಳಿದ್ದರು.

ಪ್ರಚೋದನಕಾರಿ ಭಾಷಣ ಮಾಡಿ,‌ ಕೋಮು ದ್ವೇಷಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಶೀದ್ ಉಳ್ಳಾಲ ಅವರು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಠಾಣೆಗೆ ದೂರು ನೀಡಿದ್ದರು. ದೂರಿನ‌ ಹಿನ್ನೆಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸೂಲಿಬೆಲೆ ಭಾಷಣದಲ್ಲಿ ಹೇಳಿದ್ದೇನು: ಇದುವರೆಗೆ ಮತಾಂತರ ಎಂದು ಬಡಿದಾಡಿದ್ದು ಸಾಕು. ಈಗ ಹಿಂದೂ ಧರ್ಮಕ್ಕೆ ಘರ್ ವಾಪ್ಸಿ ಮಾಡೋ ಬಗ್ಗೆ ಮಾತಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು? ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ ಅಂತ ನಮ್ಮ ಗಂಡು ಮಕ್ಕಳಿಗೆ ಕೇಳೋಣ. ಬೇರೆ ಧರ್ಮದ ಹುಡುಗಿಯರನ್ನೂ ನೋಡು ಅಂತ ಹೇಳಬೇಕು. ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ಕರೆ ನೀಡಿದ್ದರು.

ಈಗ ಟ್ವೆಂಟಿ ಟ್ವೆಂಟಿ ಮ್ಯಾಚ್ ಆಡೋ ಸಮಯ ಬಂದಾಗಿದೆ. ಇರುವ ಇಪ್ಪತ್ತು ಓವರ್‌ನಲ್ಲಿ ಬಡಿಬೇಕು ಅಷ್ಟೇ. ಘರ್ ವಾಪ್ಸಿ ಹೇಗೆ ಮಾಡೋದು ಅನ್ನೋದರ ಬಗ್ಗೆ ರೀಲ್ಸ್ ಮಾಡಿ. ಹಿಂದೂ ಧರ್ಮದಿಂದ ಹೋಗಿರುವವರನ್ನ ಮೊದಲು ವಾಪಸ್ ತರೋಣ ಎಂದು ಕರೆ ನೀಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

ಮುಂದಿನ ಸುದ್ದಿ
Show comments