Webdunia - Bharat's app for daily news and videos

Install App

ಸಿದ್ದರಾಮಯ್ಯ ಈಗ ಅನುಭವಿ ಅಲ್ಲ, ಅಸಹಾಯಕ ಮುಖ್ಯಮಂತ್ರಿ: ಛಲವಾದಿ ನಾರಾಯಣಸ್ವಾಮಿ

Krishnaveni K
ಮಂಗಳವಾರ, 18 ಫೆಬ್ರವರಿ 2025 (20:40 IST)
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಅಭಿವೃದ್ಧಿಶೂನ್ಯತೆ ಮತ್ತು ಒಳಜಗಳ- ಕಚ್ಚಾಟಗಳ ಕಾರಣಕ್ಕೆ ಪ್ರಚಾರದಲ್ಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರಕಾರ ಈ ಒಳ್ಳೆಯ ಕೆಲಸ ಮಾಡಿದೆ ಎಂದು ಮಾತನಾಡಬೇಕಿತ್ತು. ಪರಿಸ್ಥಿತಿ ಬದಲಾಗಿದೆ. ರಾಜ್ಯದ ಅನುಭವಿ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯನವರು ಅಸಹಾಯಕರಾಗಿದ್ದಾರೆ. ಸರಕಾರ ಗ್ಯಾರಂಟಿ ಹಣ ಕೊಟ್ಟಿಲ್ಲ; ಅಕ್ಕಿ ಸಿಕ್ಕಿಲ್ಲ; 2 ಸಾವಿರ ರೂ. ಆರು ತಿಂಗಳಿನಿಂದ ಬಂದಿಲ್ಲ. ಆರು ತಿಂಗಳಿನಿಂದ ವಂಚನೆ ಆಗಿದೆ ಎಂದು ಮಾತನಾಡುವ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು.
 
ಅಧಿಕಾರಕ್ಕಾಗಿ, ಮುಖ್ಯಮಂತ್ರಿ ಯಾರಾಗಬೇಕೆಂಬ ಕಚ್ಚಾಟ, ಕಿತ್ತಾಟ ಮುಂದುವರೆದಿದೆ. ಅದರಲ್ಲೂ ಇನ್ನೊಂದು ರೀತಿಯ ಪ್ರಚಾರದಲ್ಲಿ ಈ ಸರಕಾರ ಇದೆ ಎಂದು ಅವರು ಆಕ್ಷೇಪಿಸಿದರು. ಬೆಟ್ಟಿಂಗ್ ದಂಧೆಯಲ್ಲಿ ಇವತ್ತು 3 ಜನರ ಪ್ರಾಣತ್ಯಾಗ ಆಗಿದೆ. ಆನ್‍ಲೈನ್ ಬೆಟ್ಟಿಂಗ್ ದಂಧೆ ಅವ್ಯಾಹತವಾಗಿ ರಾಜ್ಯದಲ್ಲಿ ನಡೆಯುತ್ತಿದೆ ಎಂದು ದೂರಿದರು. 
 
ಇದರ ಕಡೆ ಗಮನ ಹರಿಸಲು ಸರಕಾರಕ್ಕೆ ಸಮಯವೇ ಇಲ್ಲ; ಸರಕಾರ ನಡೆಸುವವರೇ ಈ ದಂಧೆಯಲ್ಲಿ ಪಾಲುದಾರರು ಎಂದು ಬಹಳ ಜನರು ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.
 
ಸಮಗ್ರ ತನಿಖೆ ನಡೆಸಲು ಆಗ್ರಹ
ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲ್ಲೂಕಿನಲ್ಲಿ ಅಲೆಮಾರಿ ಸಮುದಾಯದ ಇಬ್ಬರು ಹೆಣ್ಮಕ್ಕಳು ಅಸುನೀಗಿದ್ದಾರೆ. ಅದು ಕೊಲೆ ಎಂದು ಆಪಾದನೆಗಳಿವೆ. ನಾನು ಎಸ್ಪಿಯವರಿಗೂ ಮಾತನಾಡಿದ್ದೇನೆ. ಇದರ ಸಮಗ್ರ ತನಿಖೆ ನಡೆಸಬೇಕಿದೆ ಎಂದು ಆಗ್ರಹಿಸಿದರು. ಈ ಸರಕಾರವು ಜನರ ಪ್ರಾಣ, ಮಾನದ ವಿಚಾರದಲ್ಲಿ ಒಂದು ರೀತಿಯ ಆಟ ಆಡುತ್ತಿದೆ ಎಂದು ಟೀಕಿಸಿದರು.
 
ಪಾರ್ಕಿನ ಜಾಗ ಬೇರೆ ಉದ್ದೇಶಕ್ಕೆ ಕೊಡದಿರಿ...
ಗುಲ್ಬರ್ಗದಲ್ಲಿ ಪಾರ್ಕಿಗಾಗಿ ಇಟ್ಟಿದ್ದ ಜಾಗವನ್ನು ಸಿದ್ಧಾರ್ಥ ವಿಹಾರ ಟ್ರಸ್ಟ್ ಪರಿವರ್ತನೆ ಮಾಡಿ ಕೊಡಿ ಎಂದು ಕೇಳಿದ ವಿಷಯವನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ. ಕಾನೂನಿನಡಿ ಆ ರೀತಿ ಮಾಡಲು ಆಗುವುದಿಲ್ಲ. ಅದು ಆಟದ ಮೈದಾನ, ಪಾರ್ಕ್‍ಗೆ ಇಟ್ಟಿದ್ದರೆ ಅದನ್ನು ವಾಣಿಜ್ಯ ಉದ್ದೇಶಕ್ಕೆ ಪರಿವರ್ತಿಸಲು ಅಸಾಧ್ಯ ಎಂದು ನುಡಿದರು. ಅದನ್ನು ಪರಿವರ್ತಿಸಬಾರದು ಎಂಬ ಅಭಿಪ್ರಾಯ ತಮ್ಮದೂ ಕೂಡ ಆಗಿದೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.
   
 
   
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments