Select Your Language

Notifications

webdunia
webdunia
webdunia
webdunia

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸರ ಕೃತ್ಯ ದೌರ್ಜನ್ಯದ ಪರಮಾವಧಿ: ಛಲವಾದಿ ನಾರಾಯಣಸ್ವಾಮಿ

Chalavadi Narayanaswamy
ಬೆಂಗಳೂರು: ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತ ಅವರ ಮೇಲೆ ನಡೆದಿದೆ ಎನ್ನಲಾದ ಅಮಾನವೀಯ ಕೃತ್ಯವು ನಾಗರಿಕ ಸಮಾಜವೇ ತಲೆತಗ್ಗಿಸುವಂತದ್ದು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಾಲಿಕೆ ಸದಸ್ಯೆಯೊಬ್ಬರ ದೂರಿನ ಹಿನ್ನೆಲೆಯಲ್ಲಿ ಸುಜಾತ ಅವರನ್ನು ವಶಕ್ಕೆ ಪಡೆದ ಪೊಲೀಸರು, ಅವರು ಒಬ್ಬ ಮಹಿಳೆ ಎಂಬ ಕನಿಷ್ಠ ಗೌರವವನ್ನೂ ನೀಡದೆ ವಿವಸ್ತ್ರಗೊಳಿಸಿ ಅಮಾನವೀಯವಾಗಿ ಚಿತ್ರಹಿಂಸೆ ನೀಡಿರುವುದು ಆಘಾತಕಾರಿಯಾಗಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾನೂನು ಪಾಲಿಸಬೇಕಾದ ಪೊಲೀಸರೇ ಈ ಮಟ್ಟದ ದೌರ್ಜನ್ಯಕ್ಕೆ ಇಳಿದಿರುವುದು ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ.

ಕೇವಲ ರಾಜಕೀಯ ಪ್ರೇರಿತ ದೂರಿನ ಆಧಾರದ ಮೇಲೆ ಒಬ್ಬ ಮಹಿಳಾ ಕಾರ್ಯಕರ್ತೆಯ ವಿರುದ್ಧ ಇಂತಹ ಭೀಕರ ಕ್ರಮ ಕೈಗೊಂಡಿರುವುದು ಪ್ರಜಾಪ್ರಭುತ್ವದ ಮೌಲ್ಯಗಳ ಹತ್ಯೆಯಾಗಿದೆ. ಆಡಳಿತ ಪಕ್ಷದ ಸದಸ್ಯರ ಅಣತಿಯಂತೆ ಪೊಲೀಸರು ಕೆಲಸ ಮಾಡುತ್ತಿರುವುದು ಮತ್ತು ಮಹಿಳೆಯರ ಆತ್ಮಗೌರವಕ್ಕೆ ಧಕ್ಕೆ ತರುತ್ತಿರುವುದು ಖಂಡನೀಯ. ರಾಜ್ಯದ ಇತಿಹಾಸದಲ್ಲಿಯೇ ಇಂತಹ ನಾಚಿಕೆಗೇಡಿನ ಸರ್ಕಾರ ಬಂದಿರಲಿಲ್ಲ ಎಂಬುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಧಿಕಾರ ಬಲದಿಂದ ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಲು ಮಹಿಳೆಯರನ್ನು ಗುರಿ ಮಾಡುತ್ತಿರುವುದು ಅಕ್ಷಮ್ಯ ಅಪರಾಧ.

ಗೃಹ ಸಚಿವರೇ, ನಿಮ್ಮ ಇಲಾಖೆಯ ಮೂಗಿನ ನೇರಕ್ಕೇ ಇಂತಹ ಅಮಾನುಷ ಘಟನೆಗಳು ನಡೆಯುತ್ತಿದ್ದರೂ ನೀವು ಮೌನವಾಗಿರುವುದು ಏಕೆ? ಮಹಿಳೆಯರಿಗೆ ರಕ್ಷಣೆ ನೀಡಲಾಗದ ನೀವು ಅಧಿಕಾರದಲ್ಲಿ ಮುಂದುವರಿಯುವ ಎಲ್ಲಾ ನೈತಿಕತೆಯನ್ನು ಕಳೆದುಕೊಂಡಿದ್ದೀರಿ. ಇಂತಹ ದೌರ್ಜನ್ಯ ಎಸಗಿದ ಅಧಿಕಾರಿಗಳ ಮೇಲೆ ತಕ್ಷಣ ಕಠಿಣ ಕ್ರಮ ಜರುಗಿಸಬೇಕು ಮತ್ತು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತೆನೆ’ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಳ್ಳಾರಿ ಶೂಟೌಟ್ ಗೆ ಐಪಿಎಸ್ ವರ್ತಿಕಾ ಕಟಿಯಾರ್ ತಲೆದಂಡ