ಕುರುಬರ ಬಗ್ಗೆ ಮಾತನಾಡಿ ಕೇಸ್ ಹಾಕಿಸಿಕೊಂಡ ಛಲವಾದಿ ನಾರಾಯಣಸ್ವಾಮಿ, ಶ್ರೀವತ್ಸ

Sampriya
ಶನಿವಾರ, 20 ಸೆಪ್ಟಂಬರ್ 2025 (16:35 IST)
ಬೆಂಗಳೂರು: ಕುರುಬರನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ ಮಾಡುವ ವಿಚಾರ ಸಂಬಂಧ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹಾಗೂ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್‌.ಶ್ರೀವತ್ಸ ವಿರುದ್ಧ ಪ್ರಕರಣ ದಾಖಲಾಗಿದೆ. 

ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 

ಕರ್ನಾಟಕ ಪ್ರದೇಶ ಕುರುಬರ ಎಸ್‌.ಟಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ ಸಿದ್ದಣ್ಣ ತೇಜಿ ಅವರು ನೀಡಿದ ದೂರಿನಂತೆ ಇದೀಗ ಪ್ರಕರಣ ದಾಖಲಾಗಿದೆ. 


ಇಬ್ಬರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಶುಕ್ರವಾರ ಬೆಳಿಗ್ಗೆ ಸಿದ್ದಣ್ಣ ತೇಜಿ ದೂರು ನೀಡಿದ್ದಾರೆ. ಆ ದೂರನ್ನು ಸಂಬಂಧಿಸಿದ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು.

ಕುರುಬರನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಛಲವಾದಿ ನಾರಾಯಣಸ್ವಾಮಿ ಹಾಗೂ ಬೆಂಗಳೂರು, ಮೈಸೂರಿನಲ್ಲಿ ಶ್ರೀವತ್ಸ ಅವರು ಹೇಳಿಕೆ ನೀಡಿದ್ದಾರೆ. 
ಮುಖ್ಯಮಂತ್ರಿ ಅವರನ್ನು ವಿರೋಧಿಸುವ ಭರದಲ್ಲಿ ಇಡೀ ಕುರುಬ ಸಮಾಜಕ್ಕೆಅವಮಾನ ಹಾಗೂ ದೌರ್ಜನ್ಯ ಎಸಗಿದ್ದಾರೆ. ಪರಿಶಿಷ್ಟ ಪಂಗಡದವರು ಹಾಗೂ ವಾಲ್ಮೀಕಿ ಸಮಾಜದವರು ಕುರುಬ ಸಮಾಜದ ಮೇಲೆ ದಂಗೆ ಎಳೆಬೇಕು ಎನ್ನುವ ರೀತಿಯಲ್ಲಿ ಸಾಮಾಜಿಕ ಜಾಲ ತಾಣ ಹಾಗೂ ಮಾಧ್ಯಮಗಳ ಮೂಲಕ ಹೇಳಿಕೆ ನೀಡಿದ್ದಾರೆ. 

ಸಮುದಾಯದ ಜನರನ್ನು ಪ್ರಚೋದಿಸುವ ಮೂಲಕ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳುಮಾಡಲು ಪ್ರಯತ್ನಿಸಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಸಿದ್ದಣ್ಣ ತೇಜಿ ಅವರು ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲು ಮಾಡಲಾಗಿದೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ನವೆಂಬರ್ ಕ್ರಾಂತಿ ಬಗ್ಗೆ ದೆಹಲಿಯಲ್ಲಿ ಸ್ಫೋಟಕ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್‌

ಜಾಗ ಸರ್ವೇಗೆ ಬಂದ ಅಧಿಕಾರಿಗಳ ಎದುರು ದೈವ ಮೈಮೇಲೆ ಬಂದ ಹಾಗೇ ವರ್ತಿಸಿದ ವ್ಯಕ್ತಿ

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡದ ಸಿದ್ದರಾಮಯ್ಯರ ಸರಕಾರ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಮುಂದಿನ ಸುದ್ದಿ
Show comments