ಬೆಂಗಳೂರು: ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿ ಅಸಹ್ಯವಾಗಿ ವರ್ತಿಸಿರುವ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗುತ್ತಿಗೆದಾರ ಚಲುವರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ, ಮಾತನಾಡಿದರು.
ಬಿಜೆಪಿ ಶಾಸಕ ಮುನಿರತ್ನ ಅವರು ಗುತ್ತಿಗೆದಾರ ಚಲುವರಾಜು ಎಂಬುವರಿಗೆ ಅವಾಚ್ಯವಾಗಿ ನಿಂದಿಸಿ, ಜಾತಿ ನಿಂದನೆ ಮಾಡಿದ್ದಾರೆ ಎನ್ನಲಾದ ಆಡಿಯೋ ಸದ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.
ಇನ್ನು ಈ ಸಂಬಂಧ ಶಾಸಕ ಮುನಿರತ್ನ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿದೆ. ಈ ಬಗ್ಗೆ ಮೊದಲ ಬಾರಿಗೆ ಮುನಿರತ್ನ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು.
ಈ ಸಂಬಂಧ ಪ್ರಕರಣದಿಂದ ಎಸ್ಕೇಪ್ ಆಗಲು ಯತ್ನಿಸಿದ್ದ ಶಾಸಕ ಮುನಿರತ್ನ ಅವರನ್ನು ಕೋಲಾರದಲ್ಲಿ ಪೊಲೀಸರು ವಶಕ್ಕೆ ಪಡೆದು, ಬೆಂಗಳೂರಿಗೆ ಕರೆತರುತ್ತಿದ್ದಾರೆ.
ಇನ್ನು ಸಿಎಂ ಅವರನ್ನು ಗುತ್ತಿಗೆದಾರ ಚಲುವರಾಜು ಅವರು ಭೇಟಿಯಾಗಿ, ಮುನಿರತ್ನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ. ಎಫ್‌ಐಆರ್ ಆದ ಬಳಿಕ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಒತ್ತಾಯಿಸಿ ಗುತ್ತಿಗೆದಾರ ಚಲುವರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಅರ್ಪಿಸಿದರು.<>