Select Your Language

Notifications

webdunia
webdunia
webdunia
webdunia

ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಸೂಚನೆ

ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಸೂಚನೆ
ಬೆಂಗಳೂರು , ಬುಧವಾರ, 31 ಮೇ 2023 (12:35 IST)
2023-24 ಸಾಲಿನ ಮುಂಗಾರು ಹಂಗಾಮಿಗೆ 25.47 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದೆ. 7.30 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಆಗಿದೆ. ಪ್ರಸ್ತುತ ಖಾಸಗಿ ಹಾಗೂ ಸಹಕಾರ ಸಂಘಗಳಲ್ಲಿ 13.90 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ.

1.68 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಕಾಪು ದಾಸ್ತಾನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಲಭ್ಯವಿದ್ದು, ಪ್ರಸ್ತುತ ರಸಗೊಬ್ಬರದ ಯಾವುದೇ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು.

ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಇದ್ದು, ರೈತರಿಗೆ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗಬಾರದು. ಪರೀಕ್ಷೆ ಮಾಡಿ ಗುಣಮಟ್ಟದ ಬಿತ್ತನೆ ಬೀಜಗಳನ್ನು ರೈತರಿಗೆ ಪೂರೈಕೆ ಮಾಡಬೇಕು. ರೈತರಿಗೆ ಅಗತ್ಯವಿರುವ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಪೂರೈಸಬೇಕು. ಮುಂಗಾರಿನಲ್ಲಿ ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಚಿವ ಚಲುವರಾಯಸ್ವಾಮಿ ಅವರು ಸೂಚನೆ ನೀಡಿದರು.

ಇದರ ಜೊತೆಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಕಡ್ಡಾಯವಾಗಿ ಎಒಗಳು ಹಾಜರಿರಬೇಕು. ಮಣ್ಣಿನ ಪರೀಕ್ಷೆಯ ರಿಪೋರ್ಟ್ಗಳನ್ನು ಸೂಕ್ತ ಸಮಯದಲ್ಲಿ ನೀಡಬೇಕು. ಬೆಳೆ ವಿಮೆ ನೀಡುವಲ್ಲಿ ರೈತರಿಗೆ ಸಮಸ್ಯೆ ಆಗಬಾರದು. ಜಿಲ್ಲಾ ಮಟ್ಟದಲ್ಲಿ ಯಾವುದೇ ಸಮಸ್ಯೆಯಾದರೂ ಜಂಟಿ ನಿರ್ದೇಶಕರೇ ನೇರ ಹೊಣೆ ಆಗ್ತೀರಾ ಎಂದು ಸಚಿವರು ಎಚ್ಚರಿಕೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ